ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ: ಬಿ. ವೈ. ರಾಘವೇಂದ್ರ

Call us

Call us

ಕುಂದಾಪ್ರ ಡಾಟ್ ಕಾಂ’ ಸುದ್ದಿ
ಕುಂದಾಪುರ: ತ್ರಾಸಿ-ಮರವಂತೆ ಬೀಚ್ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ 5 ಕೋಟಿ ರೂ. ಮಂಜೂರಾಗಿದ್ದು, ಈ ಅನುದಾನವನ್ನು ಬಳಸಿಕೊಂಡು ತ್ರಾಸಿ-ಮರವಂತೆ ಬೀಚ್‍ನಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಮತ್ತು ಬೀಚ್ ಅಭಿವೃದ್ಧಿಪಡಿಸಲಾಗುವುದು. ಬೀಚ್‍ನಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ನೀಲನಕಾಶೆ ಸಿದ್ಧಪಡಿಸಿಕೊಂಡು ಪ್ರವಾಸಿಗರ ಅನುಕೂಲಕ್ಕೆ ಬೇಕಾಗುವ ಸೌಲಭ್ಯಗಳನ್ನು ಈ ತೀರದಲ್ಲಿ ಒದಗಿಸಲು ಪ್ರಯತ್ನಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Click Here

Call us

Call us

ತ್ರಾಸಿ-ಮರವಂತೆ ಕಡಲ ತೀರಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಪ್ರವಾಸೋದ್ಯಮ ಇಲಾಖೆ ಮೂಲಕ ಕೈಗೆತ್ತಿಕೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ  ಮಾತನಾಡಿದರು.

Click here

Click Here

Call us

Visit Now

ಕಡಲ್ಕೊರೆತ ತಡೆಯುವ ಉದ್ದೇಶದಿಂದ ಎಡಿಬಿ ಮೂಲಕ ವಿನೂತನ ಮಾದರಿಯ ತಡೆಗೋಡೆ ರಚಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಅನುದಾನವನ್ನು ಬಳಸಿಕೊಂಡು ಸುಂದರ ಕಡಲ ತೀರ ನಿರ್ಮಿಸುವಲ್ಲಿ ಯೋಜನೆ ಸಿದ್ಧಪಡಿಸಬೇಕು. ಪ್ರವಾಸಿಗರನ್ನು ಆಕರ್ಷಿಸಲು ಬೇಕಾಗುವ ಎಲ್ಲಾ ಸೌಕರ್ಯಗಳನ್ನು ಅಳವಡಿಸಲು ಪ್ರಯತ್ನಿಸಲಾಗುವುದು ಎಂದು  ಹೇಳಿದರು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಸಲಹೆ ಸೂಚನೆ ನೀಡಿದರು. ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬಿ.ಕೆ., ಜಿಲ್ಲಾ ಪ್ರವಾಸೋದ್ಯಮ ಕನ್ಸಲ್ಟೆಂಟ್ ಅಮಿತ್ ಕುಮಾರ್, ಎಡಿಬಿ ಅಧಿಕಾರಿ ಗೋಪಾಲ ನಾಯ್ಕ್ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ರಾಜಪ್ಪ, ಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರ ರಮೇಶ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿಪಂ ಸದಸ್ಯರಾದ ಶೋಭಾ ಜಿ.ಪುತ್ರನ್, ಬಾಬು ಶೆಟ್ಟಿ, ಶಂಕರ ಪೂಜಾರಿ, ತಾಪಂ. ಸದಸ್ಯರು, ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Call us

Leave a Reply

Your email address will not be published. Required fields are marked *

thirteen − 5 =