ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಅಹ್ವಾನಿಸಲಾಗಿದೆ.

ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಗೆ ತಲುಪಿಸಲು ಜುಲೈ 5 ಕೊನೆಯ ದಿನ. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು ಅಥವಾ www.kasapa.in ಮೂಲಕ ಪಡೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

5 + three =