ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಮುಂದಿನ ದಿನಗಳಲ್ಲಿ ಜನರೆ ಕಾಂಗ್ರೇಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಮಂಗಳೂರಿನ ಕಾಟಿಪಳದಲ್ಲಿ ಹತ್ಯೆಯಾದ ದೀಪಕ್ ರಾವ್ ಕೊಲೆ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ನೇತೃತ್ವದಲ್ಲಿ ಬಂದೂರು ಬೈಪಾಸ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಸುಖಾನಂದ ಶೆಟ್ಟಿ, ಸದಾಶಿವ ಡಿ. ಪಡುವರಿ, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಪ್ರಧಾನ ಕಾರ್ಯದರ್ಶಿ ರವಿ ಗಾಣಿಗ ಕೆಂಚನೂರು, ಹಿಂದೂಳಿದ ಮೋರ್ಚಾದ ಅಧ್ಯಕ್ಷ ಗಣೇಶ ಪೂಜಾರಿ, ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು, ಜಯಾನಂದ ಹೋಬಳಿದಾರ್, ಶಿರೂರು ಶಕ್ತಿ ಕೇಂದ್ರದ ಅಧ್ಯಕ್ಷ ಜಗಾನಂದ ಉಪ್ಪುಂದ, ವೀgಭದ್ರ ಶೆಟ್ಟಿ ಹಾಗೂ ಇನ್ನಿತರರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.