ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯದಲ್ಲಿ ದಿಶಾ ಭಟ್‌ಗೆ ಎಂಟನೇ ರ‍್ಯಾಂಕ್, ಸನ್ಮಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಗೌರವಿಸುವುದರಿಂದ ಇತರ ವಿದ್ಯಾರ್ಥಿಗಳು ಇದರಿಂದ ಪ್ರೇರಣೆ ಪಡೆದುಕೊಂಡು ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಲು ಸಹಾಯಕವಾಗುತ್ತದೆ. ಇಂದಿನ ತಾಂತ್ರಿಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿರುವುದರಿಂದ ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲಿ ಬಹಳ ಎಚ್ಚರಿಕೆ ವಹಿಸಬೇಕು. ಗಂಗೊಳ್ಳಿಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಪತ್ರಕರ್ತ ಬಿ.ರಾಘವೇಂದ್ರ ಪೈ ಹೇಳಿದರು.

Call us

Call us

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಮ್ಯಾಂಗನೀಸ್ ಒಕ್ಕೂಟದ ವತಿಯಿಂದ ಭಾನುವಾರ ಜರಗಿದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮ್ಯಾಂಗನೀಸ್ ಒಕ್ಕೂಟದ ಅಧ್ಯಕ್ಷ ಗಣೇಶ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಎಂಟನೇ ರ‍್ಯಾಂಕ್ ಗಳಿಸಿದ ದಿಶಾ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯ ಮೇಲ್ವಿಚಾರಕ ವೆಂಕಟೇಶ ಶುಭ ಹಾರೈಸಿದರು. ಯೋಜನೆಯ ಸೇವಾ ಪ್ರತಿನಿಧಿ ಸರಸ್ವತಿ, ಒಕ್ಕೂಟದ ಕಾರ್ಯದರ್ಶಿ ಸ್ವಾತಿ ಮಡಿವಾಳ, ಉಪಾಧ್ಯಕ್ಷೆ ಗೀತಾ ಪಡಿಯಾರ್, ಜತೆ ಕಾರ್ಯದರ್ಶಿ ರೇಖಾ, ಶಾಲೆಯ ಶಿಕ್ಷಕ ಜಿ.ವಿಶ್ವನಾಥ ಭಟ್, ಒಕ್ಕೂಟದ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

18 − 11 =