ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಕೋಡಿ ಶ್ರೀನಿವಾಸ ಶೆಣೈ ವಿಧಿವಶ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಜತೆ ಮೋಕ್ತೇಸರರಾದ ಕೋಡಿ ಶ್ರೀನಿವಾಸ ಶೆಣೈ (76 ) ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಅ.10ರಂದು ನಿಧನರಾದರು.

Call us

Call us

1982ರಿಂದ ಸುಮಾರು 34 ವರ್ಷಗಳ ಕಾಲ ಕುಂದಾಪುರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಜತೆ ಮೋಕ್ತೇಸರರಾಗಿ ಸೇವೆ ಸಲ್ಲಿಸುತ್ತಿದ್ದರು. ಕುಂದಾಪುರದ ಶ್ರೀ ವೆಂಕಟರಮಣ ದೇವ ಎಜುಕೇಶನಲ್ ಟ್ರಸ್ಟ್‌ನ ಸ್ಥಾಪಕ ಸದಸ್ಯರಾಗಿ, ಪ್ರಸ್ತುತ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಸದಸ್ಯರಾಗಿಯೂ ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ್ದರು. ಕೃಷಿ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಪರಿಸರದಲ್ಲಿ ಜನಾನುರಾಗಿಯಾಗಿದ್ದರು. ಇವರ ನಿಧನದ ಹಿನ್ನಲೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಿ ಶೋಕಾಚರಣೆ ನಡೆಸಿದರು. ಕೋಡಿ ಶ್ರೀನಿವಾಸ ಶೆಣೈ ಅವರ ನಿಧನಕ್ಕೆ ಸಮಾಜದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರು ಪತ್ನಿ, ಒರ್ವ ಪುತ್ರ,, ಮೆಲಕಾ ಮಣಿಪಾಲ ಮೆಡಿಕಲ್ ಕಾಲೇಜಿನ ಉಪನ್ಯಾಸಕ ಸಂದೀಪ್ ಶೆಣೈ ಸೇರಿದಂತೆ ಒರ್ವ ಪುತ್ರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

10 − seven =