ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿಯ ಸಹಕಾರದೊಂದಿಗೆ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿ ವೇತನ ಶಿಬಿರ ನಡೆಯಿತು.
ಜಿಲ್ಲಾಧ್ಯಕ್ಷರಾದ ಜನಾಬ್ ಮುಷ್ತಾಕ್ ಅಹ್ಮದ್ ಬೆಳ್ವೆ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಉಡುಪಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕರಾದ ಡಾ. ತೇಜಸ್ವಿನಿ ಎ. ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಹೇಳಿದರು. ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮೀ ಹಳಗೇರಿ ಎನ್.ಎಸ್.ಪಿ ವಿಧ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ನಝೀರ್ ಸಾಹೇಬ್ ನೇಜಾರ್ ಅಧ್ಯಕ್ಷತೆ ವಹಿಸಿದ್ದರು, ಆದಿಉಡುಪಿ ಮಸ್ಜಿದ್ ಎ ನೂರುಲ್ ಇಸ್ಲಾಮ್ ಖತೀಬರಾದ ಮುಫ್ತಿ ಮೊಹಮ್ಮದ್ ಸುಹೇಲ್ ಕಿರಾತ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಉಸ್ತಾದ್ ಜಮಾಲ್ ಮಲ್ಪೆ, ಜಿಲ್ಲಾ ಸಮಿತಿ ಸದಸ್ಯರಾದ ಫಾಝಿಲ್ ಅಹ್ಮದ್ ಆದಿಉಡುಪಿ, ಮಸೀದಿ ಕಾರ್ಯದರ್ಶಿ ಮುಹಮ್ಮದ್ ಶಮೀರ್, ತಾಲೂಕು ಕಾರ್ಯದರ್ಶಿ ಸಮೀರ್, ಮಸೀದಿ ಆಡಳಿತ ಮಂಡಳಿಯ ಸದಸ್ಯರು, ಶೈಕ್ಷಣಿಕ ಅಭಿಮಾನಿ ಯುವಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಉಡುಪಿ ಘಟಕದ ಸದಸ್ಯರುಗಳು ಉಪಸ್ಥಿತರಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಜನಾಬ್ ಎಸ್.ಎಮ್. ಇರ್ಷಾದ್ ಸಾಹೇಬ್ ನೇಜಾರ್ ವಂದಿಸಿದರು.
