ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಸಂಕಷ್ಟದಲ್ಲಿರುವ ೧೦ ಕರೋನಾ ಸೋಂಕಿತ ಬಡ ಕುಟುಂಬಗಳಿಗೆ ನಮ್ಮ ಭೂಮಿ ಸಂಸ್ಥೆ ಕನ್ಯಾನ ಅವರು ಕೊಡಮಾಡಿದ ಆಹಾರ ಸಾಮಾಗ್ರಿಗಳ ಕಿಟ್‌ನ್ನು ಫಲಾನುಭವಿಗಳಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಸದಸ್ಯರಾದ ಶ್ರೀನಿವಾಸ ಖಾರ್ವಿ, ಬಿ. ರಾಘವೇಂದ್ರ ಪೈ, ಗ್ರಾಪಂ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್, ಶೇಖರ ಜಿ., ಉದಯ ಕುಮಾರ್, ಸಂದೀಪ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.