ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿಯನ್ನು ಬಿಡುಗಡೆಗೊಳಿಸಲು ಸಹಕಾರಿಸಿದ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರನ್ನು ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಉಪ್ಪುಂದ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಸೋಮಶೇಖರ ಖಾರ್ವಿ, ಶಿರೂರು ವಲಯ ಅಲ್ಪಸಂಖ್ಯಾತ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕಬ್ಸಿ ಮಹಮ್ಮದ್, ಶಿರೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗಪ್ಪ ಮೊಗವೀರ ಹಾಗೂ ನಾಡದೋಣಿ ಮೀನುಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.