ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ 61ನೇ ವಾರ್ಷಿಕೋತ್ಸವ

Call us

Call us

Call us

Call us

ಗಂಗೊಳ್ಳಿ: ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ ಮತ್ತು ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿಯ ೬೧ನೇ ವಾರ್ಷಿಕೋತ್ಸವ ಹಾಗೂ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ೪೨ನೇ ವಾರ್ಷಿಕೋತ್ಸವ ಸಮಾರಂಭ ಇತ್ತೀಚಿಗೆ ಜರಗಿತು.
ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ನಾವುಂದ ಬಡಾಕೇರಿಯ ನಾಗಯಕ್ಷ್ಮೀ ಪಾತ್ರಿಗಳಾದ ವೇದಮೂರ್ತಿ ಲೋಕೇಶ ಅಡಿಗ, ಭಜನೆಯಿಂದ ಭಗವಂತ ನಮ್ಮ ಇಷ್ಟಾರ್ಥಗಳನ್ನು ಪೂರೈಸುತ್ತಾನೆ. ಸಮಾಜದ ಜನರು ಸುಖಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಭಜನೆ ಸಹಕಾರಿಯಾಗುತ್ತದೆ. ಹೀಗಾಗಿ ಭಜನೆ ಮಾಡುವ ಸಂಸ್ಕೃತಿಯನ್ನು ಮನೆ ಮನದಲ್ಲಿ ಮಾಡಿಕೊಳ್ಳಬೇಕು ಎಂದರು.

Call us

Click Here

Click here

Click Here

Call us

Visit Now

Click here

ದೇವಸ್ಥಾನದ ಅಧ್ಯಕ್ಷ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ದಿನಕರ ಹೆಗ್ಡೆ ಧ್ವಜಾರೋಹಣಗೈದರು. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ, ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ, ದೇವಸ್ಥಾನದ ಮೊಕ್ತೇಸರ ನರಸಿಂಹ ಕೆ. ಶುಭ ಹಾರೈಸಿದರು. ಇದೇ ಸಂದರ್ಭ ರಾಷ್ಟ್ರಮಟ್ಟದ ಕ್ರೀಡಾ ಪ್ರತಿಭೆ ಕೀರ್ತನಾ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಯುವಕ ಮಂಡಲದ ಗೌರವಾಧ್ಯಕ್ಷ ಲಕ್ಷ್ಮಣ, ಯುವಕ ಮಂಡಲದ ಅಧ್ಯಕ್ಷ ಗಣೇಶ ಕುಮಾರ್, ಉಪಾಧ್ಯಕ್ಷ ಲೋಕೇಶ ಎನ್., ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ವಿಶ್ವವಿದ್ಯಾನಿಲಯದ ವಿವೇಕಾನಂದ ಮೊದಲಾದವರು ಉಪಸ್ಥಿತರಿದ್ದರು.

ರಘುವೀರ ಕೆ. ಸ್ವಾಗತಿಸಿದರು. ನಿತೇಶ ಎನ್.ಡಿ. ವರದಿ ವಾಚಿಸಿದರು. ರಾಜು ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಡಿ. ವಂದಿಸಿದರು.

Leave a Reply

Your email address will not be published. Required fields are marked *

11 − six =