ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ. 5: ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರೊಂದು ಡಿವೈಡರ್ ಏರಿ ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿಯಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಕರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.
ಸಿಗಂದೂರಿನಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ಮಹೇಂದ್ರ ಕ್ವಾಂಟೋ ವಾಹನ ಜಾಲಾಡಿ ಎಂಬಲ್ಲಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಷಟ್ರೀಯ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪಕ್ಕದ ರಸ್ತೆಗೆ ಮಗುಚಿ ಬಿದ್ದಿದೆ. ಇದೇ ಸಂದರ್ಭ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ರೆಡಿಗೋ ಕಾರಿಗೆ ಡಿಕ್ಕಿಯಾಗಿದ್ದು, ಆ ಕಾರೂ ಭಾಗಶಃ ಹಾನಿಗೊಳಗಾಗಿದೆ. ಪಲ್ಟಿಯಾಗಿರುವ ಮಹೀಂದ್ರ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ರಸ್ತೆಯ ಇಕ್ಕೆಲ ತಗ್ಗು ಪ್ರದೇಶವಾದ್ದರಿಂದ ಕಾರು ಕೆಳಕ್ಕುರುಳಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಎರಡು ಕಾರುಗಳು ಮುಂಭಾಗ ಸಂಪೂರ್ಣ ಜಜ್ಜಿ ಹೋಗಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.