ನೆಟ್ವರ್ಕ್ ಸಮಸ್ಯೆ ಬಗೆಹರಿಲು ಬಿ.ಎಸ್.ಎನ್.ಎಲ್ ಟವರ್ ನಿರ್ಮಿಸಲು ಸಂಸದರ ಮನವಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ ಹಾಗೂ ರೈಲ್ವೆ ಮಂತ್ರಾಲಯದ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಮತ್ತು ಉಡುಪಿ ಜಿಲ್ಲೆಯಲ್ಲಿ ನೆಟ್ವರ್ಕ್ ಸಮಸ್ಯೆ ನಿವಾರಿಸಲು ಹಾಗೂ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ನಿಗದಿತ ರೈಲು ನಿಲುಗಡೆ ಸಂಬಂಧ ಮನವಿ ಸಲ್ಲಿಸಿದ್ದಾರೆ.

Call us

Call us

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ 80 ಹಾಗೂ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 16 ಜನವಸತಿ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಾಮಾನ್ಯ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು ನೆಟ್ವರ್ಕ್ ಸಂಪರ್ಕ ಸಾಧಿಸಲು ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಅವರು ತಿಳಿಸಿದ್ದಾರೆ.

Call us

Call us

ರೈಲ್ವೆ ವಿಭಾಗಕ್ಕೆ ಸಂಬಂಧಪಟ್ಟಂತೆ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗರೀಬ್ ರಥ ಹಾಗೂ ದಾದರ್ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ ಬಗ್ಗೆ ಚರ್ಚಿಸಿ ಸೂಕ್ತ ಕ್ರಮವನ್ನು ಕೂಡಲೇ ಕೈಗೊಳ್ಳಲು ಮಾನ್ಯ ಕೇಂದ್ರ ಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *

fourteen + fourteen =