ನೋಂದಣಾಧಿಕಾರಿ ಕಚೇರಿಗಳು ಕಾರ್ಯನಿರ್ವಹಿಸಲು ಅನುಮತಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರ್ಕಾರದ ಆದೇಶದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿಂತೆ, ಜಿಲ್ಲಾ
ನೋಂದಣಾಧಿಕಾರಿ ಮತ್ತು ಉಪ-ನೋಂದಣಾಧಿಕಾರಿ ಕಚೇರಿಗಳು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Leave a Reply

Your email address will not be published. Required fields are marked *

10 − nine =