ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರರಿಗೆ ಸ್ವರ್ಣಪತ್ರ ಪ್ರಶಸ್ತಿ ಪ್ರದಾನ

Call us

Call us

ಕುಂದಾಪುರ: ಯುವಜನರಲ್ಲಿ ಸಂಘಟನೆ, ಸೇವಾ ಭಾವ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ. ಜೇಸಿ ಸಂಘಟನೆ ಸಪ್ತಾಹ ಆಯೋಜನೆಯ ಮೂಲಕ ಉತ್ತಮ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡುವ ಜೊತೆಗೆ ಸಾಂಸ್ಕೃತಿಕ ಲೋಕ ಕುಂದಾಪುರದಲ್ಲಿ ಮೇಳೈಸುವಂತೆ ಮಾಡಿದ್ದಾರೆ. ಇಂತಹ ಅಪೂರ್ವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ್ ಅವರ ಕಾರ್ಯ ವೈಖರಿ ಪ್ರಶಂಸನೀಯ ಎಂದು ಬಸ್ರೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೆಸರರಾದ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು.

Click here

Click Here

Call us

Call us

Visit Now

Call us

Call us

ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಒಂದು ವಾರಗಳ ಕಾಲ ಅದ್ಧೂರಿಯಾಗಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಕುಂದಾಪುರದ ಖ್ಯಾತ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಅವರಿಗೆ ವೃತ್ತಿ ಜೀವನದ ಸಾಧನೆಯನ್ನು ಗುರುತಿಸಿ ಜೇಸಿ ಸ್ವರ್ಣ ಪತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಕುಂದಾಪುರ ಸಿಟಿ ಪೂರ್ವಾಧ್ಯಕ್ಷ ನಿತಿನ್ ಅವಭೃತ ಅವರಿಗೆ ಕಮಲ ಪತ್ರ ಪ್ರದಾನ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು.

ಜೇಸಿ ವಲಯ 15ರ ವಲಯಾಧ್ಯಕ್ಷ ಕೃಷ್ಣಮೋಹನ್ ಪಿ.ಎಸ್., ಪೂರ್ವ ವಲಯಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ವಲಯ ಉಪಾಧ್ಯಕ್ಷ ನಾಗೇಂದ್ರ ಪೈ, ಸಿಟಿ ಜೇಸಿಸ್ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಜೇಸಿಐ ಕುಂದಾಪುರ ಸಿಟಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ, ಸಪ್ತಾಹ ಸಭಾಪತಿ ವಿಜಯ ಭಂಡಾರಿ, ನಿಕಟಪೂರ್ವಾಧ್ಯಕ್ಷ ನಿತಿನ್ ಅವಭೃತ, ಸಪ್ತಾಹ ಕಾರ್ಯದರ್ಶಿ ವೆಂಕಟೇಶ ಪ್ರಭು, ಖಜಾಂಚಿ ಯು. ರಾಘವೇಂದ್ರ ಭಟ್, ಜ್ಯೂನಿಯರ್ ಜೇಸಿ ಅಧ್ಯಕ್ಷ ಸನತ್ ಶೇಟ್, ಜೇಸಿರೆಟ್ ಅಧ್ಯಕ್ಷೆ ಸುನೀತಾ ಶ್ರೀಧರ್, ಸಪ್ತಾಹ ಸಂಚಾಲಕ ರಾಘವೇಂದ್ರ ಕೆ.ಸಿ, ಯೋಜನಾಧಿಕಾರಿ ಮಿಥುನ್ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ನಾಗೇಶ್ ನಾವಡ ವಂದಿಸಿದರು. ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು.

Call us

Leave a Reply

Your email address will not be published. Required fields are marked *

1 × three =