ನ.7-12 ಕುಂದಾಪುರದಲ್ಲಿ ಬೃಹತ್ ಲೋಕ್ ಅದಾಲತ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳಲ್ಲಿ ರಾಜಿಯಾಗಬಹುದಂತ ಪ್ರಕರಣಗಳಲ್ಲಿ ವಾದಿ ಹಾಗೂ ಪ್ರತಿವಾದಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದಲ್ಲಿ ಅಂತಹ ಪ್ರಕರಣಗಳನ್ನು ಕುಂದಾಪುರದ ನ್ಯಾಯಾಲಯದಲ್ಲಿ ನ.7 ರಿಂದ ನ.12 ರವರೆಗೆ ನಡೆಯುವ ಬೃಹತ್ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಇತ್ಯರ್ಥಪಡಿಸಿ ಆದೇಶ ನೀಡಲಾಗುವುದು ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ವಿ. ಪಾಟೀಲ್ ತಿಳಿಸಿದ್ದಾರೆ.

Click Here

Call us

Call us

ಕುಂದಾಪುರದ ನ್ಯಾಯಾಲಯ ಸಂಕೀರ್ಣದ ಬಾರ್ ಅಸೋಸೀಯೇಶನ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಬಹುದಾದ ಕೆಲವೊಂದು ಕ್ರಿಮಿನಲ್ ಪ್ರಕರಣ, ಚೆಕ್ ಬೌನ್ಸ್ ಪ್ರಕರಣ, ವಾಹನ ಅಪಘಾತ ಪ್ರಕರಣ, ಪತಿ-ಪತ್ನಿ ಪ್ರಕರಣ, ಕಂದಾಯ, ಕಾರ್ಮಿಕ ಹಾಗೂ ಅರಣ್ಯ ಇಲಾಖಾ ವ್ಯಾಪ್ತಿಯ ಕೆಲವೊಂದು ಆಯ್ದ ಪ್ರಕರಣಗಳಲ್ಲಿ ರಾಜಿ ಸಂಧಾನದ ಮೂಲಕ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ನೀಡಲಾಗುವುದು. ಮೇಲ್ಮನವಿ ಹಂತದಲ್ಲಿ ಇರುವ ಇಂತಹ ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದ ಅವರು ಕಾನೂನು ಸೇವಾ ಪ್ರಾಕಾರದ ಉದ್ದೇಶ ಹಾಗೂ ಕರ್ತವ್ಯಗಳ ಸಾಮಾನ್ಯ ಜನರಿಗೆ ತಿಳುವಳಿಕೆ ನೀಡುವ ಅಗತ್ಯ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Click here

Click Here

Call us

Visit Now

ತಾಲೂಕು ಕಾನೂನು ನೆರವು ಸಮಿತಿಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಮಾತನಾಡಿ, ವೈಯಕ್ತಿಕ ಹಿತಾಸಕ್ತಿ ಸೇರಿದಂತೆ ಕೆಲವೊಂದು ಕಾರಣಗಳಿಂದಾಗಿ ನ್ಯಾಯಾಲಯದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೆ ಇದೆ. ಸಣ್ಣ ಸಣ್ಣ ಸಮಸ್ಯೆಗಳನ್ನು ನ್ಯಾಯಾಲಯದ ಮಟ್ಟಕ್ಕೆ ತರುವ ಪ್ರವೃತ್ತಿಗಳು ಹೆಚ್ಚಾಗುತ್ತಿದೆ. ಸುಧೀರ್ಘವಾದ ವಿಚಾರಣೆಯ ಹಂತ ನಡೆಯುವುದರಿಂದಾಗಿ ಪ್ರಕರಣದಲ್ಲಿ ಭಾಗಿಯಾದವರು ಮಾನಸಿಕ ಒತ್ತಡವನ್ನು ಎದುರಿಸಬೇಕಾಗುತ್ತದೆ. ಲೋಕ ಅದಾಲತ್ ಮೂಲಕ ರಾಜಿಯಾಗಬಹುದಾದ ಬಹುತೇಕ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಬಗೆಹರಿಸಲು ಅವಕಾಶ ಮಾಡಿಕೊಡುವುದರಿಂದಾಗಿ ನ್ಯಾಯಾಲಯದಲ್ಲಿನ ಪ್ರಕರಣದ ಹೊರೆ ಕಡೆಮೆಯಾಗುತ್ತಿದೆ. ಜನರಿಗೆ ಸಮಯ ಹಾಗೂ ಹಣವೂ ಉಳಿತಾಯವಾಗುತ್ತಿದೆ. ಎಷ್ಟೋ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪಿನಿಂದಾಗಿ ಒಂದು ಕಡೆಯವರಿಗೆ ಮಾತ್ರ ಸಮಾಧಾನವಾಗುತ್ತದೆ, ಆದರೆ ಲೋಕ ಅದಾಲತ್ನಲ್ಲಿ ಆಗುವ ತೀರ್ಮಾನಗಳು ಎರಡು ಕಡೆಯವರಿಗೂ ಸಮಾಧಾನ ತರುತ್ತದೆ ಎಂದು ವಿಶ್ಲೇಷಣೆ ಮಾಡಿದರು.

ಲೋಕ ಅದಾಲತ್‌ನಲ್ಲಿ ತೀರ್ಮಾನವಾದ ಪ್ರಕರಣಗಳಿಗೆ ಮತ್ತೆ ಮೇಲ್ಮನವಿ ಸಲ್ಲಿಸುವ ಅವಕಾಶ ಇಲ್ಲದೆ ಇರುವುದರಿಂದ ಕಕ್ಷಿದಾರರಿಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಹೇಳಿದ ನ್ಯಾಯಾಧೀಶೆ ಲಾವಣ್ಯ ಅವರು 1ನೇ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯದಲ್ಲಿ ಅಂದಾಜು 4000 ಪ್ರಕರಣಗಳು ಬಾಕಿ ಇದ್ದು, ಇಲ್ಲಿ ಇತ್ಯರ್ಥವಾದ ಪ್ರಕರಣಗಳನ್ನು ಮೇಲ್ಮನವಿ ಸಲ್ಲಿಸುವ ಪರಿಪಾಠಗಳು ಇರುವುದರಿಂದ ಸುದೀರ್ಘ ಅವಧಿಯನ್ನು ವಾದಿ ಹಾಗೂ ಪ್ರತಿವಾದಿಯ ಕಡೆಯವರು ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸುವ ಅನೀವಾರ್ಯತೆ ಇರುತ್ತದೆ. ಆದರೆ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥವಾಗುವುದರಿಂದ ಈ ಅನೀವಾರ್ಯತೆಗಳು ತಪ್ಪ್ಪುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ತಾಲೂಕು ಕಾನೂನು ನೆರವು ಸಮಿತಿಯ ಕಾರ್ಯದರ್ಶಿ ಹಾಗೂ ಕುಂದಾಪುರದ ಸಿವಿಲ್ ನ್ಯಾಯಾಽಶೆ ಪ್ರೀತ್ ಜೆ., ಬಾರ್ ಅಸೋಸೀಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರವಿಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Call us

Leave a Reply

Your email address will not be published. Required fields are marked *

5 + 13 =