ಪಡಿತರ ಚೀಟಿದಾರರ ಇ-ಕೆವೈಸಿ ನೋಂದಣಿಗೆ ಜ.10 ಕೊನೆಯ ದಿನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.5:
ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಜನವರಿ 10 ಕೊನೆಯ ದಿನವಾಗಿದ್ದು, ಇ-ಕೆವೈಸಿ ಆಗದೆ ಇರುವ ಪಡಿತರ ಚೀಟಿಯ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Call us

Call us

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ, ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ದೂರವಾಣಿ ಸಂಖ್ಯೆಯ ಮಾಹಿತಿಯನ್ನು ಇ-ಕೆವೈಸಿ ಮಾಡಲು ನ್ಯಾಯಬೆಲೆ ಅಂಗಡಿಗೆ ಬರುವಾಗ ಕಡ್ಡಾಯವಾಗಿ ತರಬೇಕು.

ಜನವರಿ 10 ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ಸರ್ಕಾರದ ನಿರ್ದೇಶನದಂತೆ ಅಮಾನತುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

5 + twelve =