ಪರಿವರ್ತನ ಕೋಟ: ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಾ ಶಿಬಿರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪರಿವರ್ತನ ಪುನರ್ ವಸತಿ ಕೇಂದ್ರ ಮತ್ತು ಮನಸ್ಮಿತಾ ಫೌಂಡೇಶನ್, ಕೋಟ ಇವರ ಆಶ್ರಯದಲ್ಲಿ ಕೋಟದ ಪರಿವರ್ತನ ಪುನರ್ ವಸತಿ ಕೇಂದ್ರದಲ್ಲಿ ೧೫ನೇ ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಿ ಶಿಬಿರ ನಡೆಯಿತು.

Call us

Call us

Call us

ಜನತಾ ಫಿಶ್ ಮಿಲ್ ಇದರ ನಿರ್ದೇಶಕರಾದ ರಕ್ಷಿತ್ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾನಸಿಕ ರೋಗವು ಒಂದು ಸಾಮಾಜಿಕ ಕಳಂಕವೆಂದು ಭಾವಿಸದೇ ಮನೋ ವೈದ್ಯರ ಚಿಕಿತ್ಸೆಯನ್ನು ಪಡೆಯುವ ಪ್ರವೃತ್ತಿ ಇಂದು ಜನರಲ್ಲಿ ಹೆಚ್ಚುತ್ತಿದೆ ಹಾಗೂ ಅವರಿಗೂ ಮತ್ತು ಅವರ ಕುಟುಂಬದವರಿಗೂ ಮಾನಸಿಕ ನೆಮ್ಮದಿ ಸಿಗುವಂತಾಗುತ್ತಿದೆ ಹಾಗೆಯೇ ಈ ಪರಿಸರದ ಜನರು ಶಿಬಿರದ ಪ್ರಯೋಜನವನ್ನು ಇನ್ನು ಹೆಚ್ಚು ಪಡೆಯುವಂತಾಗಲಿ ಎಂದು ಹಾರೈಸಿದರು ಹಾಗೂ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಕೆ. ಹರೀಶ್ ಕುಮಾರ್ (ಇಂಜಿನಿಯರ್ ಉಡುಪಿ) ಅವರು ಮಾತನಾಡಿ ಮಾನಸಿಕ ಸಮಸ್ಯೆಗಳನ್ನು ಮುಚ್ಚಿಡದೆ ಆದಷ್ಟು ಶ್ರೀಘ್ರದಲ್ಲಿ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಎಂದು ಅಭಿಪ್ರಾಯ ಪಟ್ಟರು.

Call us

Call us

ಪರಿವರ್ತನ ಕೇಂದ್ರದ ವೈದ್ಯಕೀಯ ನಿದೇರ್ಶಕ ಡಾ. ಪ್ರಕಾಶ ಸಿ. ತೋಳರ್ ರವರು ಮಾತನಾಡಿ, ಈ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುತ್ತಿದೆ. ಬಡ ರೋಗಿಗಳು ಔಷಧ ಮುಂದುವರಿಸಲು ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು.

ಪರಿವರ್ತನ ಕೇಂದ್ರದ ನಿರ್ದೇಶಕ ಡಾ. ಸತೀಶ ಪೂಜಾರಿ ಅವರು ಪ್ರಾಸ್ತಾವಿಕವಾಕವಾಗಿ ಮಾತನಾಡಿದರು. ಮನಸ್ಮಿತ ಫೌಂಡೇಶನನ ನಿರ್ದೇಶಕರಾದ ಸವಿತಾ. ಪಿ ತೋಳಾರ್, ನೇಹಾ ಎಸ್ ಪೂಜಾರಿ ಇವರು ಉಪಸ್ಥಿತರಿದ್ದರು. ಆಪ್ತ ಸಮಾಲೋಚಕರಾದ ಅನುಷಾ ಶೆಟ್ಟಿ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕರಾದ ಸವಿತಾ ಪಿ. ತೋಳಾರ್ ವಂದಿಸಿದರು.

Leave a Reply

Your email address will not be published. Required fields are marked *

one × 1 =