ಕುಂದಾಪುರ: ಕನ್ನಡ, ಇಂಗ್ಲೀಷ್, ಹಿಂದಿ, ಮಲಯಾಳ ಮತ್ತು ತುಳು ಸಹಿತ ಐದು ಭಾಷೆಗಳಲ್ಲಿ ಸಾಹಿತ್ಯ ರಚನೆ ಮಾಡಿರುವ ಲೇಖಕಿ ಇಲ್ಲಿನ ಡಾ| ಪಾರ್ವತಿ ಜಿ. ಐತಾಳ್ ಅವರಿಗೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಇದುವರೆಗೆ ನೀಡಿರುವ ಸಮಗ್ರ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2018ನೇ ಸಾಲಿನ “ಸಾಹಿತ್ಯ ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಕಾಡೆಮಿಯ ಅಧ್ಯಕ್ಷ ಪ್ರೊ| ಅರವಿಂದ ಮಾಲಗತ್ತಿ, ವಿಧಾನ ಪರಿಷತ್ ಸದಸ್ಯ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಎಂ.ಎ. ಗೋಪಾಲ ಸ್ವಾಮಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಕನ್ನಡ – ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎಂ. ಜಾನಕಿ, ವಿಮರ್ಶಕ ಡಾ| ಸಿ.ಎನ್. ರಾಮಚಂದ್ರನ್ ಮತ್ತಿತರರು ಉಪಸ್ಥಿತರಿದ್ದರು.