ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪೇಜಾವರ ಸ್ವಾಮಿ ಕುರಿತು ಅವಹೇಳನಕಾರಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖಾ ವಿರುದ್ದ ಕುಂದಾಪುರ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಸ್ತ್ರಿ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಸಮಿತಿ ಅಧ್ಯಕ್ಷ ಸುಪ್ರಸಾದ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಪುರಸಭೆ ಸದಸ್ಯರಾದ ಪ್ರಭಾಕರ ವಿ., ರಾಘವೇಂದ್ರ ಖಾರ್ವಿ, ಮಾಜಿ ತಾಪಂ ಸದಸ್ಯ ರೂಪಾ ಪೈ. ಮುಂತಾದವರು ಉಪಸ್ಥಿತರಿದ್ದರು.