ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿಯವರನ್ನು ನೇಮಕಗೊಳಿಸಲಾಗಿದೆ. ಶಾಸಕ ಗೋಪಾಲ ಪೂಜಾರಿಯವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ನೇಮಕ ಪ್ರಕ್ರಿಯೆಯನ್ನು ಅಂತಿಮಗೊಳಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.