ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಯುಕೆಜಿ ಕಲಿಕೆ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮರವಂತೆ ಶ್ರೀರಾಮ ಮಂದಿರದ ಅಧ್ಯಕ್ಷ ಮೋಹನ ಖಾರ್ವಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪ್ರಮಾಣ ಪತ್ರ ವಿತರಿಸಿದ ಮಹಾಬಲ ರೈ ಈಗ ಕಲಿಕೆ ಪೂರೈಸಿದ ಯುಕೆಜಿ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣವನ್ನು ತಾವು ಕಲಿತ ಸರ್ಕಾರಿ ಶಾಲೆಯಲ್ಲಿಯೇ ನಡೆಸಬೇಕು ಎಂದು ಸಲಹೆಯಿತ್ತರು.
ಶಿಕ್ಷಕಿ ಲೀಲಾ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶ್ರೀಕಾಂತ್ ವಂದಿಸಿದರು. ಶೋಭಾ ನಿರೂಪಿಸಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ ನಾವುಂದ, ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಗಾಣಿಗ, ಚಂದ್ರ ಖಾರ್ವಿ, ಸತ್ಯನಾರಾಯಣ, ಉದ್ಯಮಿ ಇಕ್ಬಾಲ್, ಖಾರ್ವಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮ ಖಾರ್ವಿ, ಶಿಕ್ಷಕಿಯರಾದ ಶಶಿಕಲಾ, ನಯನಾ ನಾಯಕ್, ಲಲಿತಾ, ಶಾರದಾ ಪುತ್ರನ್, ಗೌರವ ಶಿಕ್ಷಕಿಯರು, ವಿದ್ಯಾರ್ಥಿ ಪೋಷಕರು ಇದ್ದರು.
ವನಮಹೋತ್ಸವದ ಮೂಲಕ ಶಾಲಾ ತೋಟ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.