ಪ್ರವಾಸೋದ್ಯಮ ಕಾಮಗಾರಿ ನಿರ್ವಹಿಸಲು ವಾಸ್ತುಶಿಲ್ಪಿಗಳನ್ನು ನೇಮಿಸಿ: ಜಿಲ್ಲಾಧಿಕಾರಿ ಜಿ ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ, ಕೈಗೊಳ್ಳುವ ವಿವಿಧ ಕಾಮಗಾರಿಗಳನ್ನು, ಪ್ರವಾಸಿಗರನ್ನು ಆಕರ್ಷಿಸುವಂತೆ, ನೂತನ ರೀತಿಯಲ್ಲಿ, ವಿಭಿನ್ನ ವಿನ್ಯಾಸದಲ್ಲಿ ಯೋಜನೆ ಸಿದ್ದಪಡಿಸಲು ವಾಸ್ತುಶಿಲ್ಪಿಯೊಬ್ಬರನ್ನು ಜಿಲ್ಲಾ ಸಮಿತಿಯಲ್ಲಿ ನೇಮಿಸಿಕೊಂಡು ಅವರ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳು ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

Click Here

Call us

Call us

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

Click here

Click Here

Call us

Visit Now

ಜಿಲ್ಲೆಯ ಎಲ್ಲಾ ಬೀಚ್‌ಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಕಾಮಗಾರಿಗಳು ಏಕ ರೂಪದಲ್ಲಿ ನಿರ್ಮಾಣಗೊಂಡರೆ ಪ್ರವಾಸಿಗರಿಗೆ ಅಕರ್ಷಕವಾಗಿರುವುದಿಲ್ಲ. ಆದ್ದರಿಂದ ಹೊಸ ಅಭಿವೃದ್ದಿ ಕಾಮಗಾರಿಗಳನ್ನು ಸಿದ್ದಪಡಿಸುವುವಾಗ ವಾಸ್ತು ಶಿಲ್ಪಿಗಳ ಸಲಹೆಯಂತೆ ವಿನೂತನ ರೀತಿಯಲ್ಲಿ ಆಕರ್ಷಕವಾಗಿ ಕಾಮಗಾರಿ ಅನುಷ್ಠಾನಗೊಳಿಸುವಂತೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿಯಲ್ಲಿ ವಾಸ್ತುಶಿಲ್ಪಿಯೊಬ್ಬರನ್ನು ನೇಮಿಸುವಂತೆ ಹಾಗೂ ಜಿಲ್ಲೆಯಲ್ಲಿನ ಎಲ್ಲಾ ಬೀಚ್‌ಗಳಿಗೆ ಬ್ಲೂ ಫ್ಲ್ಯಾಗ್ ಸರ್ಟಿಫಿಕೇಶನ್ ದೊರೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಮಾರ್ಚ್ 31 ರೊಳಗೆ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

2019-2020 ನೇ ಸಾಲಿನ ಕೆಟಿವಿಜಿ ಶಿಫಾರಸ್ಸುಗಳ ಅಡಿ ಬಿಡುಗಡೆಯಾದ ಕಾಮಗಾರಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲಿ ಕೆಲಸಗಳನ್ನು ಸಂಪೂರ್ಣಗೊಳಿಸುವಂತೆ ತಿಳಿಸಿದ ಅವರು, ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕೋಸ್ಟಲ್ ಟೂರಿಸಮ್‌ಗೆ ಹೆಚ್ಚಿನ ಅನುದಾನ ಹಣ ನೀಡಲಾಗಿದ್ದು, ಜಿಲ್ಲೆಯಲ್ಲಿನ ಅಗತ್ಯ ಕಾಮಗಾರಿಗಳ ಕುರಿತು ಯೋಜನೆಗಳ ವಿವರ ಮತ್ತು ಈ ಕಾಮಗಾರಿಗಳ ವೆಚ್ಚದ ಅಂದಾಜು ಪಟ್ಟಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಪ್ರವಾಸೋದ್ಯಮ ಟಾಸ್ಕ್ ಫೋರ್ಸ್ ಸಮಿತಿಯ ವರದಿಯ ಕರಡುಪ್ರತಿ ಸಿದ್ದಪಡಿಸಿ ಕೂಡಲೇ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

Call us

ಜಿಲ್ಲೆಯಲ್ಲಿ 13 ಪ್ರವಾಸಿ ಟ್ಯಾಕ್ಸಿ ಅರ್ಜಿ ಆಯ್ಕೆಯಾಗಿದ್ದು, ಈ ವಾಹನಗಳ ಮೇಲೆ ಪ್ರವಾಸೋದ್ಯಮ ಇಲಾಖೆಯ ಸ್ಟಿಕ್ಕರ‍್ಸ್‌ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಇಲಾಖೆಗೆ ಸೂಚಿಸಿದ ಅವರು, ಕಾಪು ಬೀಚ್‌ನ ಟೆಂಡರ್ ಮುಕ್ತಾಯಗೊಂಡಿರುವುದರಿಂದ ಹೊಸದಾಗಿ ಟೆಂಡರ್ ಕರೆಯಬೇಕು ಹಾಗೂ ಇಲ್ಲಿನ ಶೌಚಾಲಯವನ್ನು ದುರಸ್ಥಿಗೊಳಿಸಲು ತಿಳಿಸಿದರು.

ಪ್ರವಾಸಿ ಬೋಟ್ ಹಾಗೂ ಸಾಹಸ ಜಲಕ್ರೀಡೆ ಚಟುವಟಿಕೆಗಳನ್ನು ನಡೆಸಲು ಅರ್ಜಿ ಸಲ್ಲಿಸಿದವರಿಗೆ ಅನುಮತಿ ನೀಡಿದ ಅವರು, ಈ ಬೋಟ್‌ಗಳಿಗೆ ಅನುಮತಿ ಪಡೆದವರು ಯಾವುದೇ ಕಾರಣಕ್ಕೂ ಸಮುದ್ರದೊಳಗೆ ಹಾಗೂ ನಿಷೇಧಿತ ಪ್ರದೇಶವನ್ನು ಪ್ರವೇಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರವಾಸೋಧ್ಯಮ ಇಲಾಖೆ ಹಾಗೂ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಕುರಿತ ಮಾಹಿತಿಯನ್ನು ಪ್ರಚಾರಪಡಿಸಲು, ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯನಿರ್ವಹಿಸಲು ಪ್ರಮೋಷನ್ ಏಜನ್ಸಿಯನ್ನು ನೇಮಕ ಮಾಡಬೇಕು. ಹೋಮ್ ಸ್ಟೇ ಮಾರ್ಗಸೂಚಿಯನ್ವಯ ಬರುವ ಅರ್ಜಿಗಳಿಗೆ ಮಾತ್ರ ಅನುಮತಿ ನೀಡಬೇಕು. ಟೂರಿಸ್ಟ್ ಗೈಡ್‌ಗಳಿಗೆ ಸೂಕ್ತ ತರಬೇತಿ ನೀಡಿ ಪ್ರವಾಸಿ ತಾಣಗಳಲ್ಲಿ ನಿಯೋಜಿಸಿ ಪ್ರವಾಸಿ ತಾಣಗಳ ಮಾಹಿತಿಯನ್ನು ಹೆಚ್ಚಿನ ಜನರಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಹಾಗೂ ಪ್ರವಾಸಿಗರನ್ನು ಆಕರ್ಷಿಸಲು ಜಲ ಹಾಗೂ ಸಾಹಸ ಕ್ರೀಡೆಗಳನ್ನು ಜಿಲ್ಲೆಯಲ್ಲಿನ ಬೀಚ್‌ಗಳಲ್ಲಿ ನಡೆಸುವಂತಾಗಬೇಕು. ಜಿಲ್ಲೆಯಲ್ಲಿ ಫ್ಯಾಮ್ ಟ್ರಿಪ್‌ಗಳನ್ನು ಆಯೋಜಿಸಿ ಪ್ರವಾಸಿಗರಿಗೆ ಜಿಲ್ಲೆಯಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ಪರಿಚಯಿಸುವ ಕೆಲಸಗಳಾಗಬೇಕು. ಹಾಗೂ ಕರಾವಳಿಯ ಖಾದ್ಯಗಳ ಆಹಾರ ಉತ್ಸವಗಳನ್ನು ದೊಡ್ಡ ಮಟ್ಟದಲ್ಲಿ ನಡೆಸಬೇಕು ಎಂದರು.

ಪ್ರವಾಸಿ ತಾಣಗಳ ಸ್ವಚ್ಚತೆ ವಿಚಾರದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸೈಂಟ್ ಮೇರಿಸ್‌ನಲ್ಲಿರುವ ಕಸವನ್ನು ಸ್ವಚ್ಚಗೊಳಿಸಿ, ಅಲ್ಲಿ ಮಳೆಗಾಲ ಆರಂಭಕ್ಕೂ ಮುನ್ನ ತೆಂಗಿನ ಸಸಿಗಳನ್ನು ನೆಡಬೇಕು. ಅಪಾಯ ಪ್ರದೇಶಗಳಲ್ಲಿ ಅಳವಡಿಸಿರುವ ಬೇಲಿಗಳನ್ನು ತೆರವುಗೊಳಿಸಿ ಅಪಾಯ ಮುನ್ಸೂಚನಾ ಬೋರ್ಡ್, ಫ್ಲ್ಯಾಗ್‌ಗಳನ್ನು ಅಳವಡಿಸಿ, ಬೇಲಿ ಅಳವಡಿಸುವ ಮೂಲಕ ಪ್ರವಾಸಿ ತಾಣಗಳ ಆಕರ್ಷಣೆಯನ್ನು ಹಾಳುಗೆಡವದಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅರ್ಬನ್ ಆರ‍್ಕಿಟೆಕ್ಟ್ ಪ್ರತಿಮಾ ಮನೋಹರ್, ಉಡುಪಿ ಜಿಲ್ಲೆಯ ಬೀಚ್‌ಗಳಲ್ಲಿ ವಾಟರ್ ಫ್ರಂಟ್ ಮತ್ತು ಬೀಚ್ ಫ್ರಂಟ್ ಯೋಜನೆಯನ್ನು ವಿಭಿನ್ನ ರೀತಿಯ ಸೌಕರ್ಯಗಳೊಂದಿಗೆ ಅಭಿವೃಧ್ದಿಗೊಳಿಸಿ, ಮಾದರಿ ಬೀಚ್‌ಗಳನ್ನಾಗಿ ಪರಿವರ್ತಿಸುವ ಕುರಿತು ಪಿಪಿಟಿ ಪ್ರದರ್ಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ನಾಯ್ಕ್, ಪೌರಾಯುಕ್ತ ಆನಂದ ಕಲ್ಲೋಳಿಕರ್, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲೆಯ ಪ್ರಮುಖ ಪ್ರವಾಸ ಸಂಘಟನೆಗಳ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *

1 × 4 =