ಫಾರ್ಮಸಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಕೋವಿಡ್-19ರ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ , 26 ಫಾರ್ಮಸಿಸ್ಟ್ ಹುದ್ದೆಗಳಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ , ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಮಾಸಿಕ ವೇತನ 20000 ಇರುತ್ತದೆ.

ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ, ಡಿಪ್ಲಮೊ ಇನ್ ಫಾರ್ಮಸಿ ಮತ್ತು ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ಕಡ್ಡಾಯ ನೊಂದಣಿ ಮಾಡಿರುವ ಅಭ್ಯರ್ಥಿಗಳು , ತಮ್ಮ ಅರ್ಜಿಯನ್ನು ಆಗಸ್ಟ್ 3ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ ಅಜ್ಜರಕಾಡು, ಉಡುಪಿ ಜಿಲ್ಲಾಸ್ಪತ್ರೆಗೆ ಸಲ್ಲಿಸುವಂತೆ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

One thought on “ಫಾರ್ಮಸಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *

sixteen − five =