ಫೆ.9-13: ಬೈಂದೂರು ವತ್ತಿನಕಟ್ಟೆಯಲ್ಲಿ ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವ

Call us

ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Call us

Call us

ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ಹಾಗೂ ನಾಗದೇವರ ಸನ್ನಿಧಿನಲ್ಲಿ ಫೆಬ್ರವರಿ ೯ರಿಂದ ೧೩ರ ವರೆಗೆ ನಡೆಯಲಿರುವ ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಬೆಂಗಳೂರಿನ ಉದ್ಯಮಿ ದುಗ್ಗಪ್ಪ ಶೆಟ್ಟಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಬಾಬು ಶೆಟ್ಟಿ, ಪಡುವರಿ ಗ್ರಾ.ಪಂ ಉಪಾಧ್ಯಕ್ಷ ಸದಾಶಿವ ಡಿ, ಬೈಂದೂರು ಗ್ರಾ.ಪಂ ಸದಸ್ಯ ವೆಂಕ್ಟ ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇವಳದ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಬೈಂದೂರು ಸೇನೇಶ್ವರ ದೇವಳದ ಮೊಕ್ತೇಸರ ಚನ್ನಕೇಶವ ಉಪಾಧ್ಯಾಯ, ಬೈಂದೂರು ದೇವಾಡಿಗ ಸಂಘದ ಅಧ್ಯಕ್ಷ ಸುಬ್ಬಣ್ಣ, ಟೆಂಪೋ ಯುನಿಯನ್ ಅಧ್ಯಕ್ಷ ಮಹಾಬಲ ದೇವಾಡಿಗ, ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜು ಪೂಜಾರಿ, ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ ಮೊದಲಾದವರು ಉಪಸ್ಥಿತರಿದ್ದರು. (ಕುಂದಾಪ್ರ ಡಾಟ್ ಕಾಂ)

Call us

Call us

ಸಮಿತಿಯ ಅಧ್ಯಕ್ಷ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶಿವರಾಮ ಪೂಜಾರಿ ಧನ್ಯವಾದಗೈದರು. ಸುಧಾಕರ ಪಿ. ನಿರೂಪಿಸಿದರು.

Vattinakatte invitation front Vattinakatte invitation

Leave a Reply

Your email address will not be published. Required fields are marked *

four × 2 =