ಬಂಟರ ಸಂಘದ ವಿದ್ಯಾರ್ಥಿ ವೇತನ ನಿರ್ವಾಹಣಾ ಸಮಿತಿ ಸಂಚಾಲಕರಾಗಿ ಗಣೇಶ್ ಶೆಟ್ಟಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ) ಕುಂದಾಪುರ ಇದರ 2016-17ನೇ ಸಾಲಿನ ವಿದ್ಯಾರ್ಥಿ ವೇತನ ನಿರ್ವಾಹಣಾ ಸಮಿತಿಯ ಸಂಚಾಲಕರಾಗಿ ಅಲ್ಸಾಡಿ ಗಣೇಶ ಶೆಟ್ಟಿ ಆಯ್ಕೆಯಾಗಿದ್ದಾರೆ.

Call us

ಯುವ ಉದ್ಯಮಿ ಗಣೇಶ ಶೆಟ್ಟಿಯವರ ನಾಯಕತ್ವದಲ್ಲಿ ಯುವ ಬಂಟರ ಸಂಘದ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಅಗಸ್ಟ್ ತಿಂಗಳಲ್ಲಿ ನಡೆಯಲಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ನಿಗಧಿತ ಅಂಕ ಗಳಿಸಿ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ಎಲ್ಲರೂ ಸಕ್ರೀಯರಾಗಿ ಪಾಲ್ಗೋಳ್ಳಬೇಕಾಗಿ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

one × 4 =