ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪಂಚಾಯತ್‌ರಾಜ್ ವ್ಯವಸ್ಥೆಯೆಂಬುದು ಆಳಿಸಿಕೊಳ್ಳುವವರ ಆಡಳಿತವಾಗಿದ್ದು, ಗ್ರಾಮ ಸರಕಾರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸುವ ವಿಶ್ವಾಸವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಅವರು ಸೋಮವಾರ ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ 154 ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆಯಲಿದೆ. ಬೈಂದೂರು ವಿಧಾನಸಭಾ ವ್ಯಾಪ್ತಿಯ 39 ಪಂಚಾಯತಿಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸುವುದು ನಿಶ್ಚಿತ. ಗ್ರಾಮ ಮಟ್ಟದಲ್ಲಿ ಪಾರದರ್ಶಕ ಆಡಳಿತ ನೀಡಲು ಬದ್ಧರಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅವಕಾಶ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.
ಈ ಸಂದರ್ಭ ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ., ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಪ್ಪರಾಜ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ, ಜಿಲ್ಲಾ ಬಿಜೆಪಿಯ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ಬೆಸ್ಕೂರು, ಪ್ರಕಾಶ್ ಜೆಡ್ಡು ಮೊದಲಾದವರು ಇದ್ದರು.