ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜನತಾ ಪಾರ್ಟಿ ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆ ಚಿತ್ತೂರಿನ ಮೂಕಾಂಬಿಕಾ ಸಭಾಗೃಹದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಅದ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯ್ಷಕ್ಷೆ ವೀಣಾ ಎಸ್. ಶೆಟ್ಟಿ, ಮಹಿಳೆಯರು ಸಂಘಟಿತರಾದಲ್ಲಿ ಮಾತ್ರ ಸಬಲೀಕರಣ ಸಾಧ್ಯ. ಆದ್ದರಿಂದ ಮಹಿಳೆಯರು ಪಕ್ಷ ಸಂಘಟನೆಗೆ ಹೆಚ್ಚು ಗಮನ ಕೊಡಬೇಕು ಎಂದು ಹೇಳಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ನೀಡಿದರು.

ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರ ನೂತನ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರನ್ನು ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಘೋಷಿಸಿದರು. ಭಾರತೀಯ ಜನತಾ ಪಾರ್ಟಿ ಬೆಂಬಲಿತವಾಗಿ ಸ್ಪರ್ಧಿಸಿದ ವಂಡ್ಸೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಎಲ್ಲಾ ಮಹಿಳಾ ಸದಸ್ಯರನ್ನು ಅಭಿನಂದಿಸಲಾಯಿತು.

ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯ್ಕ್, ಕುಂದಾಪುರ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ ಶೆಟ್ಟಿ, ಬೈಂದೂರು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್ ಉಪಸ್ಥಿತರಿದ್ದರು.

ದೀಪಾ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅನಿತಾ ಮರವಂತೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜಯಂತಿ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

15 + twelve =