ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ.

Call us

ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ ಸ್ವಾಯತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ / ಸೇವಾ ತೆರಿಗೆ / ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು , ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

seven + fifteen =