ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಡುಗೆ ಅನಿಲ,ತೈಲ ಬೆಲೆ ಏರಿಕೆ ವಿರೋಧಿಸಿ ಸಿಐಟಿಯುನಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕೊರೊನಾ ಪರಿಹಾರ ಪ್ರತಿ ಕಾಮಿ೯ಕರಿಗೆ 10000ರೂ. ನೀಡಬೇಕು. ಮೊದಲಾದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)ರಾಜ್ಯ ಸಮಿತಿಯ ಕರೆಯ ಮೇರೆಗೆ ಬೈಂದೂರು ತಾಲೂಕು ಸಿಐಟಿಯು ಕಾಮಿ೯ಕ ಸಂಘಗಳ ನೇತೃತ್ವದಲ್ಲಿ ಇಂದು ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಕಾಮಿ೯ಕರ ಬೃಹತ್ ಪ್ರತಿಭಟನೆ ನಡೆಯಿತು.
ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಬೇಡಿಕೆಗಳಮನವಿಯನ್ನು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸಿಐಟಿಯು ಮುಖಂಡರಾದ ಗಣೇಶ ತೊಂಡೆಮಕ್ಕಿ,ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಶೀಲಾವತಿ, ರಾಜೀವಪಡುಕೋಣೆ, ವೆಂಕಟೇಶ ಕೋಣಿ, ನಾಗರತ್ನ ನಾಡ, ಮಂಜುಪಡುವರಿ, ಗಣೇಶ ಮೊಗವೀರ ಬೈಂದೂರು, ಮಾಧವ ಪೂಜಾರಿ ಉಪ್ಪುಂದ, ಲಕ್ಷ್ಮಣ ಯಡ್ತರೆ,ಹರೀಶ್ ಬೈಂದೂರು, ರಾಮ ಬಡಾಕೆರೆ, ಮೊದಲಾದವರು ಹೋರಾಟದ ನೇತೃತ್ವ ವಹಿಸಿದ್ದರು.