ಬೈಂದೂರು: ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದೇಶ ಮತ್ತು ದೇಶ ಕಾಯುತ್ತಿರುವ ಸೈನಿಕರ ವಿರೋಧಿ ಘೋಷಣೆ ಕೂಗಿದವರನ್ನು ಬಿಟ್ಟು ಎಬಿವಿಪಿ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ದೇಶದ್ರೋಹಿಗಳನ್ನು ಬೆಂಬಲಿಸುತ್ತಿರುವುದು ಭಾರತೀಯರಾದ ನಮ್ಮ ದೌರ್ಭಾಗ್ಯ ಎಂದು ಬಿಜೆಪಿ ಬೈಂದೂರು ಕ್ಷೇತ್ರ ಸಮಿತಿ ಕೋಶಾಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಸರಕಾರದ ವಿರುದ್ದ ಹರಿಹಾಯ್ದರು.

Call us

Click Here

Click here

Click Here

Call us

Visit Now

Click here

ಬುಧವಾರ ಬೈಂದೂರಿನಲ್ಲಿ ಕ್ಷೇತ್ರ ಬಿಜೆಪಿ ಮತ್ತು ಕ್ಷೇತ್ರ ಯುವಮೋರ್ಚಾ ಬೆಂಗಳೂರಿನ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಮೂರು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಈವರೆಗೆ ಹಗರಣಗಳಲ್ಲಿಯೇ ಮುಳುಗಿದ್ದು, ನ್ಯಾಯ ಕೇಳಲು ಬಂದ ದೇಶಭಕ್ತರ ಮೇಲೆ ಪೋಲಿಸರಿಂದ ಲಾಠಿಚಾರ್ಜ್ ಮೂಲಕ ದೌರ್ಜನ್ಯ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ತಕ್ಷಣ ತಪ್ಪಿತಸ್ಥ ಸಂಸ್ಥೆಯ ವಿರುದ್ದ ಕ್ರಮಕೈಗೊಳ್ಳುವ ತನಕ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶ ದೀಪಕ್‌ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಕೆ. ಬಾಬು ಶೆಟ್ಟಿ, ಶಂಕರ ಪೂಜಾರಿ, ಸುರೇಶ ಬಟ್ವಾಡಿ, ತಾರಾನಾಥ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುಕುಮಾರ್, ಕ್ಷೇತ್ರ ರೈತಮೋರ್ಚಾ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ, ತಾಪಂ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬೈಂದೂರು ಮುಖ್ಯರಸಸ್ತೆಯ ಮೂಲಕ ಸಾಗಿಬಂದ ಪ್ರತಿಭಟನಾ ಜಾಥಾ ವಿಶೇಷ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.

► ಕುಂದಾಪುರ: ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ – http://kundapraa.com/?p=16885 

 news byndoor bjp protest1 news byndoor bjp protest2.PNGnews byndoor bjp protest

Call us

Leave a Reply

Your email address will not be published. Required fields are marked *

two × three =