ಬೈಂದೂರು: ಉಪನ್ಯಾಸ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಮಂಗಳವಾರ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪೂರ್ಣಪ್ರಜ್ಞಾ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ, ತುಳುನಾಡಿನ ಶಾಸನಗಳ ಮಹತ್ವ ಎಂಬ ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ತುಳುನಾಡಿನ ಇತಿಹಾಸ, ಇಲ್ಲಿನ ರಾಜವಂಶಗಳು, ಅವರ ಕಾಲದಲ್ಲಿ ರಚಿತವಾದ ಶಾಸನಗಳ ಕುರಿತ ವಿಚಾರಗಳನ್ನು ತಿಳಿಸುವುದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಐತಿಹಾಸಿಕ ಸ್ಮಾರಕಗಳು ಹಾಗೂ ಶಾಸನಗಳ ರಕ್ಷಣೆ ವಿದ್ಯಾರ್ಥಿಗಳ ಹೊಣೆಯಾಗಿರಬೇಕೆಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ರಘು ನಾಯ್ಕ, ಪ್ರಾಧ್ಯಾಪಕರಾದ ಡಾ. ಅಶ್ವತ್ಥ ನಾಯ್ಕ, ಶಿವಕುಮಾರ್, ನಾಗರಾಜ ಶೆಟ್ಟಿ, ಲತಾ ಪೂಜಾರಿ ಹಾಗೂ ಶಿವಯ್ಯ ಗೌಡ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಮೋಹನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಮೇಘನ ನಿರೂಪಿಸಿದರು. ಅನುಷಾ ವಂದಿಸಿದರು.

Leave a Reply

Your email address will not be published. Required fields are marked *

seventeen − 4 =