ಬೈಂದೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಡಿಪೋ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಭಾಗದ ನಾಗರಿಕರ ಬಹುಕಾಲದ ಬೇಡಿಕೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಡಿಪೋ ನಿರ್ಮಾಣದ ಸ್ಥಳ ವೀಕ್ಷಣೆಗಾಗಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗ್ಡೆ ಭೇಟಿ ನೀಡಿದರು.

Call us

Call us

Click Here

Visit Now

ಬಳಿಕ ಬೈಂದೂರು ಶಾಸಕರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಮುಖಂಡರೊಡನೆ ಸಮಾಲೋಚನೆ ನಡೆಸಿದ ಅವರು, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನಂತೆ ಸ್ಥಳ ಪರಿಶೀಲನೆ ಹಾಗೂ ಇಲ್ಲಿನ ಸ್ಥಿತಿಗತಿಗಳ ಬಗೆಗೆ ಅವಲೋಕನ ಮಾಡಲು ಇಲ್ಲಿಗೆ ಆಗಮಿಸಿದ್ದು, ಸರಕಾರಿ ಸ್ಥಳ ದೊರೆತ ಪ್ರದೇಶದಲ್ಲಿ ಬಸ್ಸು ನಿಲ್ದಾಣ ಹಾಗೂ ಡಿಪೋ ನಿರ್ಮಿಸಲಾಗುವುದು. ಅಧಿಕಾರಿಗಳಿಂದ ಸರ್ವೆ ಕಾರ್ಯ ನಡೆಸಿದ ಬಳಿಕ ಬಸ್ಸು ನಿಲ್ದಾಣ, ಬೆಂಗಳೂರು ಮತ್ತು ಬೈಂದೂರು ಸುತ್ತಲಿನ ಗ್ರಾಮೀಣ ಪ್ರದೇಶಕ್ಕೆ ಹೊಸ ಬಸ್ ರೂಟ್ ಮಾಡುವುದು ಮುಂತಾದವುಗಳ ಬಗೆಗೆ ಚರ್ಚಿಸಿದರು.

Click here

Click Here

Call us

Call us

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಮೂಕಾಂಬಿಕಾ ರೈಲ್ವೆ ಯಾತ್ರಿಕರ ಸಂಘದ ಅಧ್ಯಕ್ಷ ವೆಂಕಟೇಶ್ ಕಿಣಿ ಸಲಹೆ ಸೂಚನೆಗಳನ್ನು ನೀಡಿದರು. ನಾಗರೀಕರ ಹಿತರಕ್ಷಣಾ ಸಮಿತಿಯ ಜಗದೀಶ್ ಪಟವಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ್, ಸ್ಥಳೀಯರಾದ ಆನಂದ ಶೆಟ್ಟಿ ನಾಕಟ್ಟೆ, ಪರಮೇಶ್ವರ ಪಟವಾಲ್, ಸತೀಶ್ ಕೆ.ವಿ, ಮಣಿಕಂಠ ದೇವಾಡಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

3 × 5 =