ಬೈಂದೂರು ಜಿಪಂ ಕಾಂಗ್ರೆಸ್ ಅಭ್ಯರ್ಥಿ ಎಸ್. ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಮಾಜಿ ಜಿ.ಪಂ ಅಧ್ಯಕ್ಷ ಹಾಗೂ ಹಾಲಿ ತಾಪಂ ಸದಸ್ಯ ಎಸ್. ರಾಜು ಪೂಜಾರಿ ತಮ್ಮ ಬೆಂಬಲಿಗರೊಂದಿಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಜನರ ನಡುವೆಯೇ ಇದ್ದು ಜನಸೇವೆ ಮಾಡುತ್ತಾ ಬಂದಿರುವ ತನಗೆ ಬೈಂದೂರಿನ ಮತದಾರರು ಈ ಭಾರಿಯೂ ಬಹುಮತದಿಂದ ಆಯ್ಕೆಮಾಡುವರೆಂಬ ವಿಶ್ವಾಸವಿದೆ. ಹಲವು ಚುನಾವಣೆಯನ್ನು ಎದುರಿಸಿರುವುದರಿಂದ ಸ್ವರ್ಧಿಸುವ ಬಗ್ಗೆ ಭಯವಿಲ್ಲ. ಜನಪರ ಕಾರ್ಯಗಳನ್ನು ಮಾಡುತ್ತಾ ಬಂದಿರುವುದರಿಂದ ಪ್ರತಿ ಮತದಾರರನ್ನೂ ಭೇಟಿ ಸುಲಭವಾಗುತ್ತಿದೆ. ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದು ಬರಲಿದ್ದಾರೆ ಎಂದರು.

Call us

Call us

ಈ ಸಂದರ್ಭದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ, ಕಾರ್ಯದರ್ಶಿ ನಾಗರಾಜ ಗಾಣಿಗ, ಬೈಂದೂರು ಗ್ರಾಪಂ ಅಧ್ಯಕ್ಷ ಜನಾರ್ಧನ, ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

eleven − 6 =