ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಯೋರ್ವರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ಡಿವೈಎಸ್‌ಪಿ ಗಣಪತಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಬೈಂದೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ಆದೇಶಿಸಬೇಕು ಹಾಗೂ ಪ್ರಕರಣದಲ್ಲಿ ಭಾಗಿಯಾದವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಬೈಂದೂರು ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನಾ ಜಾಥಾ ನಡೆಸಿದ್ದರು.