ಬೈಂದೂರು: ನಾಗರಿಕ ಸೇವಾ ಪರೀಕ್ಷೆ ತಯಾರಿಗೆ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಕೋಶ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ How to Plan your Preparation for Civil Service Examination ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಡಿವಿಸನ್ ಉಪ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ ಐ.ಪಿ.ಎಸ್ ಆಗಮಿಸಿ ನಾಗರಿಕ ಸೇವಾ ಪರೀಕ್ಷಾ ತಯಾರಿ ಕುರಿತು, ತಾವು ಪರೀಕ್ಷಾ ತಯಾರಿಯ ವೇಳೆ ಓದಿರುವ ಪುಸ್ತಕಗಳ ವಿವರ ಮತ್ತು ಸಂದರ್ಶನದ ಸಮಗ್ರ ಮಾಹಿತಿ ನೀಡಿದರು. ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆ ಏರಬೇಕೆಂಬ ಆಶಾ ಭಾವನೆಯನ್ನು ವ್ಯಕ್ತಪಡಿಸಿದರು.

ಪ್ರಾಂಶುಪಾಲರಾದ ಡಾ| ರಘು ನಾಯ್ಕ ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಆಂತರಿಕ ಗುಣಮಟ್ಟ ಕೋಶ ಸಂಚಾಲಕ ಡಾ| ಅಶ್ವತ್ಥ ಡಿ ನಾಯ್ಕ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್‌ಮೆಂಟ್ ಸೆಲ್ ನ ಸಂಚಾಲಕ ವಿನೋದ ಬಸುಪಟ್ಟದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನಾಗರಾಜ ಶೆಟ್ಟಿ ಹಾಗೂ ನವೀನ ಹೆಚ್ ಜೆ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಲತಾ ಪೂಜಾರಿ ಸ್ವಾಗತಿಸಿದರು, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಶಿವಕುಮಾರ್ ಪಿ.ವಿ ವಂದಿಸಿದರು. ವಿದ್ಯಾರ್ಥಿನಿ ಗೀತಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

4 × two =