ಬೈಂದೂರು ಪಟ್ಟಣ ಪಂಚಾಯತ್: ದರ ಪರಿಷ್ಕರಣೆ ಕುರಿತ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ನಳಗಳ ನೀರಿನ ಬಳಕೆದಾರರು/ ನೀರಿನ ಕಂದಾಯ/ ನೀರಿನ ಸಂಪರ್ಕ ಶುಲ್ಕ / ಜಾಹೀರಾತುದಾರರು / ಉದ್ದಿಮೆ ಪರವಾನಿಗೆದಾರರು / ಕಟ್ಟಡ ನಿರ್ಮಾಣ ಮತ್ತು ದುರಸ್ಥಿ ನವೀಕರಣದಾರರು/ ಘನತ್ಯಾಜ್ಯ ವಸ್ತು ನಿರ್ವಹಣೆಯ ಬಳಕೆದಾರರು ಹಾಗೂ ಇತರೆ ಶುಲ್ಕದ ದರಗಳ ಉಪವಿಧಿಯನ್ನು ಸಿದ್ಧಪಡಿಸಿದ್ದು, ಪಟ್ಟಣ ಪಂಚಾಯತಿಯ ಆರ್ಥಿಕ ಹಿತದೃಷ್ಟಿಯಿಂದ ಹಾಗೂ ಸರ್ಕಾರದ ಸುತ್ತೋಲೆಯನ್ವಯ, ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ನಿರ್ಣಯದಂತೆ ದರ ಪರಿಷ್ಕರಿಸಿ ಪಟ್ಟಣ ಪಂಚಾಯತ್ ಕಚೇರಿಯ ಸೂಚನಾಫಲಕದಲ್ಲಿ ಪ್ರಕಟಿಸಲಾಗಿದೆ.

Call us

Call us

ಸಾರ್ವಜನಿಕರು ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಪ್ರಕಟಗೊಂಡ 15 ದಿನಗಳ ಒಳಗೆ ಸೂಕ್ತ ಕಾರಣಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಕಚೇರಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ನಿಯಮಾನುಸಾರ ಪರಿಷ್ಕೃತ ದರವನ್ನು ಜಾರಿಗೆ ತರಲು ಕ್ರಮವಹಿಸಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

three × 1 =