ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕು ಬಂಟರ ಯುವ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಲ್ಲಿನ ಬಂಟರ ಸಮುದಾಯ ಭವನದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಗಂಟಿಹೋಳೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ವಿಜಯ್ ಶೆಟ್ಟಿ ಮೂರೂರು, ಗೌರವಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಕಾಲ್ತೋಡು, ಜೊತೆ ಕಾರ್ಯದರ್ಶಿಯಾಗಿ ದೀಪಕ್ ಶೆಟ್ಟಿ ಶಿರೂರು, ಪ್ರತಾಪ್ ಶೆಟ್ಟಿ ಹಳಗೇರಿ, ಖಜಾಂಚಿ ರವೀಂದ್ರ ಶೆಟ್ಟಿ ಉಪ್ಪುಂದ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಕುದ್ರುಕೊಡು, ಪ್ರದೀಪ್ ಶೆಟ್ಟಿ ಸೂರ್ಕುಂದ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿರಾಜ್ ಶೆಟ್ಟಿ ಉಳ್ಳೂರು ಆಯ್ಕೆಯಾಗಿದ್ದಾರೆ.
ತಾಲೂಕಿನ ವಿವಿಧ ಪದಾಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಅಧ್ಯಕ್ಷ ವಿಶ್ವನಾಥ ಶೆಟ್ಟಿ ಗಂಟಿಹೋಳೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ತಿಳಿಸಿದ್ದಾರೆ.