ಚುನಾವಣಾ ಪೂರ್ವ ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಪ್ರಯೋಜನ ಪ್ರತಿಯೊಂದು ಮನೆಯನ್ನು ತಲುಪುತ್ತಿದೆ. ಸಮಾಜದ ಕಟ್ಟಕಡೆಯ ಜನರೊಂದಿಗೆ ಸರಕಾರ ಇದೆ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಸಾಬೀತುಪಡಿಸಿದೆ. ಸರಕಾರದ ಯೋಚನೆ, ಯೋಜನೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರು ಜನಸಾಮಾನ್ಯರಿಗೆ ತಿಳಿಸಬೇಕಾದ ಅಗತ್ಯತೆ ಇದೆ. ಚುನಾವಣೆಪೂರ್ವ ನೀಡಿದ ಭರವಸೆಯಂತೆ ಸಮೃದ್ಧ, ಶಕ್ತಿಶಾಲಿ ಹಾಗೂ ಸ್ವಾಭಿಮಾನಿ ಭಾರತ ನಿರ್ಮಾಣ ನಡೆಯುತ್ತಿದ್ದು, ಸರಕಾರ ಮತ್ತು ಮತದಾರರ ನಡುವೆ ಕಾರ್ಯಕರ್ತರು ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದು ಮುಜರಾಯಿ, ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Call us

Click Here

Click here

Click Here

Call us

Visit Now

Click here

ತ್ರಾಸಿಯ ಕೊಂಕಣಿ ಖಾರ್ವಿ ಸಭಾಭವನದಲ್ಲಿ ಜರಗಿದ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದ ಕೆಲವೇ ಕೆಲವು ವಿಧಾನಸಭಾ ಕ್ಷೇತ್ರಗಳಳಿಗೆ ಅತೀ ಹೆಚ್ಚು ಅನುದಾನ ದೊರೆತಿದ್ದು, ಈ ಪೈಕಿ ಬೈಂದೂರು ಮೊದಲ ಸ್ಥಾನದಲ್ಲಿದೆ. ಪ್ರವಾಸೋದ್ಯಮ, ಸೋಮೇಶ್ವರ ಮತ್ತು ಮರವಂತೆ ಬೀಚ್ ಅಭಿವೃದ್ಧಿ, ಮೀನುಗಾರಿಕಾ ಬಂದರುಗಳ ಅಭಿವೃದ್ಧಿ, ಕೊಡಚಾದ್ರಿಗೆ ರೋಪ್‌ವೇ ನಿರ್ಮಾಣ, ರಸ್ತೆಗಳ ಅಭಿವೃದ್ಧಿ ಸಹಿತ ಯಾರೂ ಊಹಿಸಲು ಸಾಧ್ಯವಾಗದಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆತಿದೆ. ಶಾಸಕರ ಮತ್ತು ಸಂಸದರ ನಿರಂತರ ಪ್ರಯತ್ನದ ಫಲವಾಗಿ ಸುಮಾರು 520 ಕೋಟಿ ರೂ. ವೆಚ್ಚದ ಮನೆ ಮನೆಗೆ ಕುಡಿಯುವ ನೀರಿನ ಯೋಜನೆ ಕೂಡ ಶೀಘ್ರದಲ್ಲೇ ಅನುಷ್ಠಾನಗೊಳ್ಳಲಿದೆ. ಇದನ್ನು ಜನರಿಗೆ ಮನವರಿಕೆ ಮಾಡುವ ಜವಾಬ್ಧಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಬಂದ ಬಳಿಕ ದೇಶದಲ್ಲಿ ಅಮೂಲಾಗ್ರ ಬದಲಾವಣೆ ಆಗಿದೆ. ಕಾಶ್ಮೀರದಲ್ಲಿ 370 ವಿಧಿ ರದ್ದತಿ, ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಸೇರಿದಂತೆ ಅನೇಕ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಇದೀಗ ಕೇಂದ್ರ ಸರಕಾರದ ಅನುದಾನಗಳು ನೇರವಾಗಿ ಗ್ರಾಮ ಪಂಚಾಯತ್‌ಗೆ ವರ್ಗಾವಣೆಯಾಗುತ್ತಿರುವುದರಿಂದ ಗ್ರಾಮ ಪಂಚಾಯತ್‌ಗಳ ಜವಾಬ್ದಾರಿ ಹೆಚ್ಚಾಗಿದೆ. ಗ್ರಾಪಂ ಸದಸ್ಯರು ಸಕ್ರೀಯವಾಗಿ ಕೆಲಸ ಮಾಡಬೇಕು. ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಮಾತನಾಡಿ, ಗ್ರಾಮ ಮಟ್ಟದಿಂದ ಕೇಂದ್ರದವರೆಗೂ ಅಧಿಕಾರದಲ್ಲಿರುವ ಬಿಜೆಪಿ ರಾಜಕೀಯವಾಗಿ ಮುಂಚೂಣಿಯಲ್ಲಿದೆ. ಎಲ್ಲಾ ಪಕ್ಷಗಳಂತೆ ಬಿಜೆಪಿಯಲ್ಲ. ಭಾರತೀಯ ಜನತಾ ಪಾರ್ಟಿಗೆ ಅಧಿಕಾರವೇ ಮೂಲಮಂತ್ರವಲ್ಲ. ವಿಚಾರ, ಸಿದ್ಧಾಂತದ ಆಧಾರದ ಮೇಲೆ ಪಕ್ಷ ದೇಶದಲ್ಲಿ ರಾಜಕೀಯ ಮಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳನ್ನು ಎಲ್ಲಾ ವರ್ಗದ ಜನರಿಗೆ ಮುಟ್ಟಿಸುವ ಮೂಲಕ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.

Call us

ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಏನೆಲ್ಲಾ ಭರವಸೆಗಳನ್ನು ಕೊಟ್ಟಿದ್ದೇನೊ ಎಲ್ಲವನ್ನೂ ಈಡೇರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಕುಡಿಯುವ ನೀರು, ವೆಂಟೆಡ್ ಡ್ಯಾಂ, ರಸ್ತೆ, ಮೀನುಗಾರಿಕೆ ಮುಂತಾದ ಮೂಲಭೂತ ಸೌಕರ್ಯಗಳಿಗೆ ಒತ್ತು ಕೊಟ್ಟಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ಅವರ ಸಹಕಾರದಿಂದಾಗಿ ಬೈಂದೂರು ಕ್ಷೇತ್ರ ಅಭಿವೃದ್ದಿಯ ಪಥದತ್ತ ಸಾಗುತ್ತಿದೆ. ಕಾರ್ಯಕರ್ತರು ಅಭಿವೃದ್ಧಿವನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಕಾರ್ಯಕರ್ತರೆಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ ಮುಂದಿನ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಬಹುದು ಎಂದು ಅವರು ಹೇಳಿದರು.

ಸಭೆಯಲ್ಲಿ ಅಗಲಿದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ, ಅಶೋಕ ಕುಮಾರ್ ಶೆಟ್ಟಿ, ರಾಜೇಶ ಉಪ್ಪಿನಕುದ್ರು, ಜಯರಾಮ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.

ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯ್ಕ್, ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ್ ಭಂಡಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜೆಡ್ಡು, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.

ಜನತಾ ಪಾರ್ಟಿ ಬೈಂದೂರು ಮಂಡಲ ವಿನೋದ್ ಭಂಡಾರಿ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾದರ್ಶಿನಿ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ್ ಪೂಜಾರಿ ಜೆಡ್ಡು ವಂದಿಸಿದರು.

Leave a Reply

Your email address will not be published. Required fields are marked *

3 × 3 =