ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಮಹಾಗಣಪತಿ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ ಯೋಗ ಶಿಕ್ಷಕ ಯೋಗೇಶ ನಾಯಕ್ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ ಪೂಜಾರಿ ಜೆಡ್ಡು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಅಶೋಕ ಎನ್.ಡಿ., ಸಿದ್ಧಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರವೀಣ ಶೆಟ್ಟಿ, ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ ಶೆಟ್ಟಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಬಿಜೆಪಿ ಬೈಂದೂರು ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಾಂತಿ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ವಿವಿಧ ಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.