ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಇದರ ಆಶ್ರಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೈಂದೂರು ತಾಲೂಕಿನ ಜ್ಞಾನ ವಿಕಾಸ ಕೇಂದ್ರದ ಸೇವಾ ಪ್ರತಿನಿಧಿ ಮತ್ತು ಸಂಯೋಜಕಿಯರ ಸಭೆ ತ್ರಾಸಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾ ಕಛೇರಿಯಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಗಣೇಶ್ ಬಿ., ಜ್ಞಾನವಿಕಾಸ ಕಾರ್ಯಕ್ರಮದ ಮಹತ್ವ, ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಜ್ಞಾನವಿಕಾಸ ಕಾರ್ಯಕ್ರಮದ ಅನುಷ್ಠಾನ ಹಾಗೂ ಈ ವರ್ಷದ ಕಾರ್ಯಕ್ರಮನ್ನು ಉತ್ತಮವಾಗಿ ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಯೋಜನಾಧಿಕಾರಿ ಶಶಿರೇಖಾ ಪಿ ಅವರು ಕೇಂದ್ರದ ಸದಸ್ಯರಲ್ಲಿ ಹೆಚ್ಚಿನ ಆಸಕ್ತಿ ಬರುವ ಕಾರ್ಯಕ್ರಮ ಹಮ್ಮಿಕ್ಕೊಳ್ಳುವ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕೇಂದ್ರದಲ್ಲಿ ಮಾಹಿತಿ ಹಮ್ಮಿಕೊಳ್ಳುವಂತೆ ತಿಳಿಸಿದರು. ಆಂತರಿಕ ಲೆಕ್ಕ ಪರಿಶೋಧಕ ರಾಘವೇಂದ್ರ ಕೇಂದ್ರದಲ್ಲಿ ನಿರ್ವಹಿಸಬೇಕಾದ ದಾಖಲಾತಿಗಳ ಬಗ್ಗೆ ಕೇಂದ್ರದ ಶ್ರೇಣಿಕರಣ ಹಾಗೂ ಗ್ರಂಥಾಲಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಜ್ಞಾನವಿಕಾಸ ಸೇವಾ ಪ್ರತಿನಿಧಿಗಳು ಹಾಗೂ ಸಂಯೋಜಕಿಯರು ಉಪಸ್ಥಿತರಿದ್ದರು. ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಗೀತಾ ಕಾರ್ಯಕ್ರಮ ನಿರ್ವಹಿಸಿದರು.
