ಬೈಂದೂರು: ಯುವ ಕಾಂಗ್ರೆಸ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉತ್ತರ ಪ್ರದೇಶದಲ್ಲಿ ಅಮಾಯಕ ದಲಿತ ಯುವತಿ ಮನೀಷಾ ವಾಲ್ಮಿಕಿ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆ ಮಾಡಿರುವ ಕಾಮಾಂಧರ ಪೈಶಾಚಿಕ ಕುಕೃತ್ಯವನ್ನು ಖಂಡಿಸಿ ಮತ್ತು ಸಂತ್ರಸ್ತ ಕುಟುಂಬಕ್ಕೆ ಸಾಂತ್ವಾನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರ ಬಂಧನವನ್ನು ಖಂಡಿಸಿ ಬೈಂದೂರು ಯುವ ಕಾಂಗ್ರೆಸ್ ವತಿಯಿಂದ ಬೈಂದೂರು ಸರ್ಕಲ್ ಬಳಿ ಪ್ರತಿಭಟನೆ ನೆಡೆಸಲಾಯಿತು.

ಪ್ರತಿಭಟನೆಗೂ ಮುನ್ನ ಕಾಮಾಂಧರಿಂದ ಅಮಾನುಷವಾಗಿ ಹತ್ಯೆಯಾದ ದಲಿತ ಯುವತಿಯ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ  ಸಲ್ಲಿಸಲಾಯಿತು. ಸಂತೃಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳದ ಉತ್ತರ ಪ್ರದೇಶ ಬಿಜೆಪಿ ಸರಕಾರದ ಮುಖ್ಯಮಂತ್ರಿ ಆಧಿತ್ಯನಾಥರ ಪ್ರತಿಕೃತಿ ದಹಿಸಲಾಯಿತು. ಬ್ಲಾಕ್ ಅಧ್ಯಕ್ಷರಾದ ಎಸ್. ಮದನ್ ಕುಮಾರ್, ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ, ಗಣೇಶ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಶಾಂತಿ ಪೆರೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ನರಸಿಂಹ ಹಳಗೇರಿ, ನಾಗರಾಜ ಉಪ್ಪುಂದ, ಲಕ್ಷಣ್ ಬೈಂದೂರು, ಸುರೇಶ ಬೈಂದೂರು, ನಾಗಮ್ಮ, ಮಾಣಿಕ್ಯ ಹೋಬಳಿದಾರ್, ದೀಪಕ್ ನಾವುಂದ, ವಿಜಯ್ ನಾಗೂರು, ಮಣಿಕಂಠ ದೇವಾಡಿಗ, ಉದಯ ಪೂಜಾರಿ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

three + fourteen =