ಬೈಂದೂರು: ರತ್ತೂಬಾಯಿ ಹೈಸ್ಕೂಲಿನಲ್ಲಿ ಸಾಂಸ್ಕೃತಿಕ ಸೌರಭ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಂಸ್ಕೃತಿಯ ಪ್ರೀತಿ ಜೀವನದಲ್ಲಿ ಹೊಸ ಬದುಕನ್ನು ರೂಪಿಸುತ್ತದೆ. ಮಾನವೀಯ ಮೌಲ್ಯ ವೃದ್ಧಿಸಿ ಸಮಾಜಮುಖಿ ಚಿಂತನೆಗಳನ್ನು ಕಲ್ಪಿಸುತ್ತದೆ. ಅದೇ ರೀತಿ ಕೇವಲ ಪುಸ್ತಕದ ಜ್ಞಾನ ಜೀವನಕ್ಕೆ ಸಾಕಾಗುವುದಿಲ್ಲ. ಶಿಕ್ಷಣೇತರ ಚಟುವಟಿಕೆಗಳು ಜೀವನದದ್ದುಕ್ಕಕ್ಕೂ ನೆನಪಿನಲ್ಲಿ ಉಳಿದು ಸಾಂಸ್ಕೃತಿಕವಾಗಿ ಎಲ್ಲವನ್ನು ಎದುರಿಸುವ ಧೈರ್ಯ ತುಂಬಲು ಸಹಕಾರಿಯಾಗುತ್ತದೆ ಎಂದು ಮೀನುಗಾರಿಕಾ, ಯುವಜನ ಸೇವೆ, ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

Call us

Click Here

Click here

Click Here

Call us

Visit Now

Click here

ಬೈಂದೂರು ರತ್ತೂಬಾಯಿ ಜನತಾ ಪೌಢಶಾಲೆಯಲ್ಲಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ನಡೆದ ಸಾಂಸ್ಕೃತಿಕ ಸೌರಭ ಉದ್ಘಾಟಿಸಿ ಮಾತನಾಡಿದರು. ಸಾಂಸ್ಕೃತಿಕ ಸಿರಿವಂತಿಕೆ ಪಡೆದ ಭಾರತದೇಶ ವಿಶ್ವದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹಿಂದಿನವರಿಂದ ಪರಂಪರಾಗತವಾಗಿ ಬಂದಿರುವ ಹಲವು ಕಲೆಗಳನ್ನು ಮುಂದಿನ ಪೀಳಿಗೆಯವರೆಗೂ ವಿಸ್ತರಿಸುವ ನಿಟ್ಟಿನಲ್ಲಿ ಸರಕಾರ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಹೊಸ ಪ್ರತಿಭೆಗಳಗೆ ಉತ್ತೇಜನ ನೀಡುತ್ತಿದೆ. ಇದು ಕೇವಲ ಮನರಂಜನೆ ಮಾತ್ರ ಸೀಮಿತಗೊಳಿಸದೇ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ಶಂಕರ ಪೂಜಾರಿ, ಗೌರಿ ದೇವಾಡಿಗ, ಸುರೇಶ ಬಟ್ವಾಡಿ, ತಾಪಂ ಸದಸ್ಯೆ ಸುಜಾತಾ ದೇವಾಡಿಗ, ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಹೋಬಳಿ ಕಸಾಪ ಅಧ್ಯಕ್ಷ ಗಣಪತಿ ಹೋಬಳಿದಾರ್ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ. ಎಂ. ರವಿಕುಮಾರ್ ಸ್ವಾಗತಿಸಿ, ಶಾಲೆಯ ಮುಖ್ಯಶಿಕ್ಷಕ ಮಂಜು ಕಾಳಾವರ್ ವಂದಿಸಿದರು. ಪ್ರಕಾಶ ಮಾಕೋಡು ಮತ್ತು ಆನಂದ ಮದ್ದೋಡಿ ನಿರೂಪಿಸಿದರು. ನಂತರ ದಿನವಿಡೀ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳ ಆಯ್ದ ಖ್ಯಾತ ಕಲಾವಿದರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ, ಸುಗಮ ಸಂಗೀತ, ಜನಪದಗೀತೆ, ಸಮೂಹನೃತ್ಯ, ಡೊಳ್ಳುಕುಣಿತ, ಕೋಲಾಟ, ನಾಟಕ, ಗಮಕ, ಹೋಳಿನೃತ್ಯ ಮತ್ತು ಗುಮ್ಟೆವಾದನ ಪ್ರದರ್ಶನ ನಡೆಯಿತು.

Leave a Reply

Your email address will not be published. Required fields are marked *

16 + ten =