ಬೈಂದೂರು: ರಾಮಕ್ಷತ್ರಿಯ ಸಮಾಜದ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಪನ್ನ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಧರ್ಮದ ಕೇಂದ್ರವಾದ ಕುಟುಂಬವು ನಿಜವಾದ ವ್ಯವಸ್ಥೆಯ ಹೆಬ್ಬಾಗಿಲು. ಗ್ರಹಸ್ಥ ಜೀವನದಲ್ಲಿ ಧರ್ಮದ ಮೂಲಕ ಸಾಗಿದಾಗ ಸುಖ, ಶಾಂತಿ ಹಾಗೂ ನೆಮ್ಮದಿ
ಶಾಶ್ವತವಾಗಿರುತ್ತದೆ. ಪತಿ-ಪತ್ನಿಯರ ಸಂಬಂಧ ಪಾವಿತ್ರತೆಯ ಭಾವವಿದ್ದು, ಮೌಲ್ಯಾಧಾರಿತವಾಗಿದೆ. ವಿವಾಹ ಇಲ್ಲದಿದ್ದರೆ ಕುಟುಂಬ ಕಳಚುವ ಸಾಧ್ಯತೆಗಳಿದೆ ಎಂದು ಸ್ವರ್ಣವಲ್ಲಿ
ಮಠಾಧೀಶ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಹೇಳಿದರು.

Call us

Call us

Click Here

Visit Now

ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಬೈಂದೂರು ರಾಮಕ್ಷತ್ರಿಯ ಸಮಾಜದ ೧೧ನೇ ವರ್ಷದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ
ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಭಗವಂತನ ಕಲ್ಯಾಣೋತ್ಸದಲ್ಲಿ ಹಲವಾರು ರೀತಿಯ ಪ್ರಯೋಜನಗಳಿದ್ದರೂ, ಸಮಾಜ ಸುಭೀಕ್ಷೆಯಾಗುತ್ತದೆ. ಅದರಿಂದ ನಾವು
ನಮ್ಮ ಜೀವನದಲ್ಲಿ ಆದರ್ಶ, ತತ್ವ ಹಾಗೂ ಉತ್ತಮ ಚಿಂತನೆಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗುತ್ತದೆ. ಇದೊಂದು ಪುಣ್ಯದ ಕಾರ್ಯವಾಗಿದ್ದರಿಂದ ಮಂಗಳಕಾರ್ಯ,
ಶುಭವಿವಾಹವೆಂದು ಸಂಭೋಧಿಸುತ್ತಾರೆ. ವಿವಾಹವೆಂಬುದು ಧರ್ಮ, ಅರ್ಥ, ಕಾಮಗಳನ್ನು ಅತಿಕ್ರಮಿಸಿ ಹೊಗುವುದಿಲ್ಲ ಎಂಬ ನೆಲೆಯಲ್ಲಿ ಸಂದೇಶ ಸಾರುವ ಪವಿತ್ರಬಂಧನವಾಗಿದೆ.
ಆದರೆ ಇತ್ತೀಚಿಗೆ ಸಮಸ್ತ ಹಿಂದು ಸಮಾಜ ನಾಲ್ಕು ಅಂಶಗಳಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ. ಸೂಕ್ತ ವಯಸ್ಸಿನಲ್ಲಿ ವಿವಾಹ ಆಗದಿರುವುದು, ವಿಚ್ಛೇದನ ಹೆಚ್ಚುತ್ತಿರುವುದು,
ಭ್ರೂಣಹತ್ಯೆಯಂತಹ ಮಹಾಪಾಪದ ಕೆಲಸಕ್ಕೆ ಮನ ಮಾಡುತ್ತಿರುವುದು ಹಾಗೂ ಸಂತತಿ ನಿಯಂತ್ರಣಕ್ಕೆ ಆದ್ಯತೆ ನೀಡುತ್ತಿರುವುದು ಧರ್ಮವಲ್ಲ ಎಂದರು.

Click here

Click Here

Call us

Call us

ವರ್ಷದಿಂದ ವರ್ಷಕ್ಕೆ ಹಿಂದುಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಸ್ವಾಮೀಜಿ ಇದು ಒಳ್ಳೆ ಬೆಳವಣಿಗೆಯಲ್ಲ ಎಂದು ವಿಷಾದಿಸಿದರು. ಸರಕಾರದ ಜನಸಂಖ್ಯಾ
ನಿಯಂತ್ರಣದ ಆದೇಶಗಳು ಕೇವಲ ಹಿಂದುಗಳಿಗಲ್ಲ. ಅನ್ಯ ಧರ್ಮಿಯರಿಗೂ ಅನ್ವಯಿಸುತ್ತದೆ. ಆದರೆ ಇವರು ಇಂತಹ ಯಾವುದು ಉದ್ದೇಶ ನಮ್ಮ ಧರ್ಮದಲ್ಲಿಲ್ಲ ಎಂದು
ಪ್ರತಿಪಾದಿಸುತ್ತಾ ಬಂದಿದ್ದಾರೆ. ಇದು ಹೀಗೆ ಮುಂದುವರಿದರೆ ಹಿಂದುಸ್ಥಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರಾಗಬಹುದು. ಹೀಗಾಗಿ ಪ್ರತೀ ಕುಟುಂಬಗಳು ಕನಿಷ್ಟ ಮೂರು ಮಕ್ಕಳನ್ನು
ಸಮಾಜಕ್ಕೆ ನೀಡುವಂತಾಗಬೇಕು ಎಂದರು.

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅಧ್ಯಕ್ಷತೆವಹಿಸಿದ್ದರು. ನಿವೃತ್ತ ಕರ್ನಲ್ ಡಿ.ಕೆ. ನರಸಿಂಹ ನಾಯಕ್, ಧಾರ್ಮಿಕ, ಸಾಮಾಜಿಕ ಮುಖಂಡ ಬಿ. ರಾಮಕೃಷ್ಣ ಶೇರೆಗಾರ್, ಬೈಂದೂರು
ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ಬಿ. ಗೋಪಾಲ್ ನಾಯಕ್, ಮಂಗಳೂರು ಉದ್ಯಮಿ ರಾಮಚಂದ್ರ ಕೆ. ಎಸ್., ತಾಪಂ ಸದಸ್ಯೆ ಮಾಲಿನಿ ಕೆ ಉಪಸ್ಥಿತರಿದ್ದರು.

ಕೇಶವ ನಾಯಕ್ ಸ್ವಾಗತಿಸಿ, ಗಣಪತಿ ಎಸ್. ವಂದಿಸಿದರು. ಗಣಪತಿ ಹೋಬಳಿದಾರ್ ನಿರೂಪಿಸಿದರು. ಬೆಳಿಗ್ಗೆ ಕಟ್ಟೆ ಪರಮೇಶ್ವರ ಭಟ್ಟರ ನೇತೃತ್ವದಲ್ಲಿ ೧೦.೪೫ಕ್ಕೆ ಕರ್ಕಾಟಕ ಲಗ್ನ
ಸುಮುಹೂರ್ತದಲ್ಲಿ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಜರುಗಿತು. ಶಶಿಕಲಾ ಮತ್ತು ಬಿ. ಗೋಪಾಲ್ ನಾಯಕ್ ಹಾಗೂ ವಿನೋದಿನಿ ಮಂಜುನಾಥ ದುಬಾರಿ ದಂಪತಿಗಳು
ಸೇವಾಕರ್ತರಾಗಿ ಕಾರ್ಯ ನಿರ್ವಹಿಸಿದರು.

Leave a Reply

Your email address will not be published. Required fields are marked *

2 × four =