ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರಿಗೆ ನೂತನವಾಗಿ ರಚನೆಗೊಂಡ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗೋಪಾಲ ಪೂಜಾರಿ ಅವರ ಅಭಿಮಾನಿಗಳು ಬೈಂದೂರು ಕಾಂಗ್ರೆಸ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ನಾಲ್ಕು ಭಾರಿ ಶಾಸಕರಾಗಿ ಹತ್ತಾರು ಜನಪರ ಯೋಜನೆಗಳನ್ನು ಈ ಭಾಗದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದಲ್ಲದೇ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಶಾಸಕರನ್ನು ಈ ಭಾರಿಯೂ ಸಚಿವ ಸಂಪುಟದಿಂದ ಕೈಬಿಟ್ಟಿರುವುದು ಸರಿಯಲ್ಲ. ಮುಖ್ಯಮಂತ್ರಿಗಳ ಈ ನಡೆಯನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.