ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ತಮ್ಮ ಕಛೇರಿಯಲ್ಲಿ 62ನೇ ಗಣರಾಜ್ಯೋತ್ಸವ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯರಾಧ ಕೆ. ರಮೇಶ ಗಾಣಿಗ ಎಸ್. ರಾಜು ಪೂಜಾರಿ, ಯಡ್ತರೆ ಗ್ರಾಪಂ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಉಪಾಧ್ಯಕ್ಷೆ ಕಲಾವತಿ ನಾಗರಾಜ ಗಾಣಿಗಸ್ಜಿಪಂ ಮಾಜಿ ಸದಸ್ಯ ಮದನ್ ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ, ಹಿರಿಯ ಮುಖಂಡ ವಾಸುದೇವ ಯಡಿಯಾಳ್, ಬ್ಲಾಕ್ ಕಾರ್ಯದರ್ಶಿ ನಾಗರಾಜ ಗಾಣಿಗ, ಯುಥ್ ಕಾಂಗ್ರೆಸ್ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಬೈಂದೂರು ಪಂಚಾಯತ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕೆ. ವಿ. ಸತೀಶ್, ಯಡ್ತರೆ, ಪಡುವರಿ, ಬೈಂದೂರು ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು,
ಬೈಂದೂರು ಶಾಸಕರ ಕಛೇರಿ: ಗಣರಾಜ್ಯೋತ್ಸವ ದಿನಾಚರಣೆ
