ಬೈಂದೂರು: ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಪನ್ನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಶ್ರೀಮದ್ ಸ್ವರ್ಣವಲ್ಲಿ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಕಟ್ಟೆ ಪರಮೇಶ್ವರ ಭಟ್ಟರ ನೇತೃತ್ವದಲ್ಲಿ ಬೈಂದೂರು ರಾಮಕ್ಷತ್ರಿಯ ಸಮಾಜದ ೧೨ನೇ ವರ್ಷದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಮತ್ತು ಶ್ರೀ ಸೀತಾರಾಮಚಂದ್ರ ದೇವರ ಬ್ರಹ್ಮಕಲಶೋತ್ಸವ ಜರುಗಿತು.

Click Here

Call us

Call us

ಸೇವಾಕರ್ತರಾಗಿ ಶಾರದಾ ಮತ್ತು ಕರ್ನಲ್ ಡಿ. ನರಸಿಂಹ ನಾಯಕ್ (ವಧುವಿನ ಕಡೆ) ಹಾಗೂ ಜಯಂತಿ ಮತ್ತು ದಿನಕರ್ ರಾವ್ ಹೈದರಾಬಾದ್ (ವರನ ಕಡೆ) ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಉದ್ಯಮಿ ಬಿಜೂರು ರಾಮಕೃಷ್ಣ ಶೇರೆಗಾರ್ ದಂಪತಿಗಳು ಮಧ್ಯಾಹ್ನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಂಗಳೂರಿನ ಡಾ. ಹರಾ ನಾಗರಾಜಾಚಾರ್ಯ ಮತ್ತು ಬಳಗದವರಿಂದ ನೃತ್ಯರೂಪ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಮಹಾಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

Click here

Click Here

Call us

Visit Now

ಸಂಜೆ ಶ್ರೀ ಗಂಗಾಧರೇಂದ್ರ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಮಾಜಿ ಶಾಸಕ ಕೆ. ಲಕ್ಷ್ಮೀನರಾಯಣ ಇವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರುಗಿತು. ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ಬಿಜೂರು ಗೋಪಾಲ ನಯಕ್, ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟಿ ಬಿಜೂರು ರಾಮಕೃಷ್ಣ ಶೇರೆಗಾರ್ ಹಾಗೂ ಸಮಾಜದ ಇತರ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

16 + 13 =