ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವ ಆಸಕ್ತಿಗಳು ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ. ಭವಿಷ್ಯದ ನಿರ್ದಿಷ್ಟ ಗುರಿ ಮತ್ತು ಕಠಿಣ ಪ್ರಯತ್ನ ನಮ್ಮನ್ನು ಯಶಸ್ಸಿನ ಕಡೆಗೆ ಕೊಂಡೊಯ್ಯುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

Call us

Call us

Click Here

Visit Now

ಬೈಂದೂರು ಸರಕಾರಿ ಪದವಿಪೂರ್ವ ಕಾಲೆಜಿನ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ಮಹಾನ್ ಸಾಧಕರು ಸಾಧಿಸಿದ್ದು ಕೂಡಾ ಪರಿಶ್ರಮದಿಂದಲೆ. ಈ ನೆಲೆಯಲ್ಲಿ ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳ ಮೂಲಕ ಯಶಸ್ಸು ಕಾಣಬೇಕು ಎಂದರು.

Click here

Click Here

Call us

Call us

ಹೊನ್ನಾವರದ ಎಸ್‌ಡಿಎಂ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀಪಾದ ಶೆಟ್ಟಿ ಸ್ಪೂರ್ತಿ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ಶಿಕ್ಷಣದ ಮೂಲಕ ಮಕ್ಕಳು ಕ್ರೀಯಾಶೀಲ ಕನಸನ್ನು ಕಾಣುವಂತಾಗಬೇಕು. ಪ್ರತಿಯೊಂದರಲ್ಲಿಯೂ ತಾಯಿಯನ್ನು ಕಾಣುವ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ನಾಡಿಗೆ ಶಕ್ತಿ ಕೊಡುವ ಉತ್ತಮ ಪ್ರಜೆಗಳನ್ನು ಶಿಕ್ಷಣ ಕೇಂದ್ರಗಳಲ್ಲಿ ರೂಪಿಸಬೇಕು ಎಂದರು.

ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ವಿದ್ಯಾ ಸಂಸ್ಥೆಗಳಲ್ಲಿ ಮಕ್ಕಳಿಗೆ ಭಾವನಾತ್ಮಕ ವ್ಯಕ್ತಿತ್ವ ವಿಕಸನದ ಶಿಕ್ಷಣ ಸಿಗುವಂತಾಗಬೇಕು ಎಲ್ಲರಿಗೂ ಭಗವಂತ ಕೊಟ್ಟ ಸೂಕ್ಷ್ಮ ಅಂಗಾಗಗಳಲ್ಲಿ ಸಮರ್ಪಕ ವ್ಯವಸ್ಥೆಯಿದೆ. ಪ್ರತಿಯೊಂದನ್ನು ಸ್ವೀಕರಿಸಿ ಪುನಃ ಜಗತ್ತಿಗೆ ನೀಡುವಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.

ಜಿಪಂ ಸದಸ್ಯ ಶಂಕರ ಪೂಜಾರಿ, ತಾಪಂ ಸದಸ್ಯೆ ಸುಜಾತಾ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಯಡ್ತರೆ ಗ್ರಾಪಂ ಮಾಜಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಉಪಪ್ರಾಂಶುಪಾಲೆ ಜ್ಯೋತಿ ಶ್ರೀನಿವಾಸ್, ವಿದ್ಯಾರ್ಥಿ ನಾಯಕ ಮಹೇಶ್ ಕುಮಾರ್, ವಿದ್ಯಾರ್ಥಿ ನಾಯಕಿ ಚಿನ್ಮಯಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಪಾಲಾಕ್ಷ ಟಿ. ವರದಿ ಮಂಡಿಸಿದರು. ಉಪನ್ಯಾಸಕರಾದ ಹರೀಶ್ ಕೋಟ್ಯಾನ್ ಸ್ವಾಗತಿಸಿ, ಜಯ ಪೂಜಾರಿ ವಂದಿಸಿದರು. ರಾಮನಾಥ ನಾಯಕ್ ನಿರೂಪಿಸಿದರು. ನಂತರ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

nine − eight =