ಬೈಂದೂರು ಸಾಗರ್ ಕ್ರೆಡಿಟ್ ಕೋ-ಅಪರೇಟಿವ್‌ಗೆ ಜಿಲ್ಲಾ ಬ್ಯಾಂಕಿನ ಪ್ರಶಸ್ತಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ., ಬೈಂದೂರು ಇದರ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಲಭಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಅವರು ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಷ್ಟು ಬಿಲ್ಲವ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ರಘುರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

three × 5 =