ಬೈಂದೂರು ಹಬ್ಬ – ಶ್ರೀ ಸೇನೇಶ್ವರ ಮನ್ಮಹಾ ರಥೋತ್ಸವದ ಸಂಭ್ರಮ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ |
ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಇಂದು ಮಧ್ಯಾಹ್ನ ಸಾಂಕೇತಿಕ ಚಾಲನೆ ದೊರೆಯಿತು. ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರು ರಥೋತ್ಸವದಲ್ಲಿ ಊರ ಪರವೂರ ಸಾವಿರಾರು ಭಕ್ತಸಮೂಹ ಪಾಲ್ಗೊಂಡು ಪುನೀತರಾಗುತ್ತಾರೆ. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯಕ್ಕೆ ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡುತ್ತದೆ. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಸಂಜೆಯ ವೇಳೆಗೆ ನಗರದ ರಥವನ್ನು ಬೈಂದೂರು ಬೈಪಾಸ್ ವರೆಗೆ ಏಳೆಯಲಾಗುತ್ತದೆ.

Call us

Call us

ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ.

ರಥೋತ್ಸವದ ಪೂರ್ವದಲ್ಲಿ ಮುಸ್ಲಿಂ ಭಾಂದವರನ್ನು ಆಹ್ವಾನಿಸುವ, ರಥೋತ್ಸವದ ಆರಂಭದಲ್ಲಿ ಬೈಂದೂರಿನ ಪೊಲೀಸ್ ಠಾಣಾಧಿಕಾರಿಯನ್ನು ಕರೆತಂದು ಚಾಲನೆ ದೊರಕಿಸುವ ಸಂಪ್ರದಾಯ ಇಂದಿಗೂ ರೂಢಿಯಲ್ಲಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ

Call us

Call us

ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತದೆ. ರಥೋತ್ಸವದ ರಾತ್ರಿ ಓಕುಳಿ ಹೊಂಡದ ಆಟ ವಿಶೇಷವಾಗಿ ಜರುಗುತ್ತವೆ. ಸಂಜೆ ನಡೆಯಲಿರುವ ರಥೋತ್ಸವಕ್ಕೂಬನ್ನಿ.

Byndoor Rathotsava_Byndooru Habba (3) Byndoor Rathotsava_Byndooru Habba (2)

Leave a Reply

Your email address will not be published. Required fields are marked *

five + four =