ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲೂಕು ಘಟಕ ಸಾರಥ್ಯದಲ್ಲಿ ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ – ಯಡ್ತಾಡಿ ಇವರ ಸಹಯೋಗದಲ್ಲಿ ನಡೆಯುವ ಬ್ರಹ್ಮಾವರ ತಾಲೂಕು ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಲಸಾವರಿ ದೇವಸ್ಥಾನ ಯಡ್ತಾಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಬಗ್ಗೆ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ನರೇಂದ್ರ ಕುಮಾರ್ ವಿವರಿಸಿದರು. ಜ.24ರಂದು ಮಹಾತ್ಮಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆಯಲ್ಲಿ ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಆನ್ ಲೈನ್ ಮೂಲಕ ನಡೆಸುವ ಬಗ್ಗೆ ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾರಾಯಣ ಮಡಿ ತಿಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪರಿಷತ್ತಿನ ಸಂಘಟನ ಕಾರ್ಯದರ್ಶಿ ಅಲ್ತಾರು ನಾಗರಾಜ್, ವಿನಾಯಕ ಯುವಕ ಮಂಡಲದ ಅಧ್ಯಕ್ಷ ರತ್ನಾಕರ ಪೂಜಾರಿ, ಕಾರ್ಯದರ್ಶಿ ಪ್ರಶಾಂತ ಸೂರ್ಯ, ಹಾಗೂ ಸದಸ್ಯರು ಉಪಸ್ಥಿರಿದ್ದರು.