ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಜಯಾ ಕಾಲೇಜು, ಮೂಲ್ಕಿ ಇಲ್ಲಿನ ಪ್ರಾಧ್ಯಾಪಕರಾದ ಅಶ್ವಿನ್ ಎಂ ಅವರು ಮಾತನಾಡಿ ಸಂಸ್ಕೃತ ಭಾಷೆಯ ಹಾಗೂ ಸಂಸ್ಕೃತಿಯ ರಕ್ಷಕರಾಗೋಣ. ಸಂಸ್ಕೃತ ಭಾಷೆಯು ಭಾರತೀಯತೆಯನ್ನು ಉಳಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಸಂಸ್ಕೃತ ವಿಭಾಗ ಮುಖ್ಯಸ್ಥೆ ಡಾ.ಯಶವಂತಿ ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.
ಸಂಸ್ಕೃತೋತ್ಸವ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ವಿಜೇತರರಾದ ಮತ್ತು ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಮೇಘನಾ ಪ್ರಭು ವಂದಿಸಿದರು.